ವಾಣಿಜ್ಯ ಜಾಹಿರಾತು

ಬೆಂಗಳೂರು: 2021-22ನೇ ಸಾಲಿನ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಘೋಷಿಸಿದ್ದಾರೆ.
ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 85.63 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು ಶೇ. 90.29 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇ. 81.30 ಬಾಲಕರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ರಾಜ್ಯದ 26 ಜಿಲ್ಲೆಗಳು ಎ ಗ್ರೇಡ್ ಫಲಿತಾಂಶ ಪಡೆದುಕೊಂಡಿದೆ. 145 ಮಕ್ಕಳು 625ಕ್ಕೆ 625 ಅಂಕ ಪಡೆದಿದ್ದಾರೆ . 329 ವಿದ್ಯಾರ್ಥಿಗಳಿಗೆ 624 ಅಂಕ ಹಾಗೂ 472 ವಿದ್ಯಾರ್ಥಿಗಳು 623  ಅಂಕ ಗಳಿಸಿದ್ದಾರೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.

ಮಧ್ಯಾಹ್ನ 1 ಗಂಟೆಯ ಬಳಿಕ ಇಲಾಖೆಯ ವೆಬ್‌ಸೈಟ್‌ https://karresults.nic.in ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಹಾಗೂ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜೂನ್ 27,2022ರಂದು ಪೂರಕ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣಸಚಿವರು ತಿಳಿಸಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.