ವಾಣಿಜ್ಯ ಜಾಹಿರಾತು

ಮಂಗಳೂರು: ಉಜಿರೆಯಲ್ಲಿ ಫೆ.3ರಿಂದ 5ರವರೆಗೆ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೇಮಾವತಿ ವಿ. ಹೆಗ್ಗಡೆ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ| ಎಂ. ಪಿ. ಶ್ರೀನಾಥ ಅವರು ತಿಳಿಸಿದ್ದಾರೆ.

ಧರ್ಮಾಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹೇಮಾವತಿ ವಿ. ಹೆಗ್ಗಡೆ ಅವರು ರಾಜ್ಯದ ಲಕ್ಷಾಂತರ ಗ್ರಾಮೀಣ ಮಹಿಳೆಯರಿಗೆ ಸ್ಪೂರ್ತಿ. ಹೇಮಾವತಿ ಅಮ್ಮನವರ ದೂರದೃಷ್ಟಿ ಆಲೋಚನೆ ಮತ್ತು ಚಿಂತನೆಗಳು ರಾಜ್ಯಾದ್ಯಂತ ವಿವಿಧ ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಿ ರಾಜ್ಯದ ಗ್ರಾಮೀಣ ಮಹಿಳೆಯರ ಜೀವನದಲ್ಲಿ ಸಮಗ್ರವಾದ ಸಬಲೀಕರಣವನ್ನುಂಟು ಮಾಡಿದೆ ಎಂದು ಶ್ರೀನಾಥ್ ತಿಳಿಸಿದರು.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.