ಅಹ್ಮದಾಬಾದ್: ಗುಜರಾತಿನ ರಾಜಕೋಟ್ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿ ಪೊಲೀಸರು ಆಸ್ಪತ್ರೆಯ ಮೂವರು ಹಿರಿಯ ಅಧಿಕಾರಿಗಳನ್ನು ಬಂಧಿಸಿದ್ದಾರೆ.
ನ.27ರಂದು ಉದಯ್ ಶಿವಾನಂದ್ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ರೋಗಿಗಳು ಸಜೀವ ದಹನ ಹೊಂದಿದ್ದರು, 6 ರೋಗಿಗಳಿಗೆ ಸುಟ್ಟ ಗಾಯಗಳಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಆಸ್ಪತ್ರೆಯಲ್ಲಿದ್ದ 28 ರೋಗಿಗಳನ್ನು ರಕ್ಷಿಸಿ ಬೇರೆ ಆಸ್ಪತ್ರೆಗೆ ದಾಖಲಿಸಿದ್ದರು.
ಗೋಕುಲ್ ಹೆಲ್ತ್ ಕೇರ್ ಪ್ರೈವೆಟ್ ಲಿಮಿಟೆಡ್ ಕಂಪೆನಿ ಆಸ್ಪತ್ರೆಯನ್ನು ನಿರ್ವಹಿಸುತ್ತಿದ್ದು, ಇಲ್ಲಿನ ಮೂವರು ಹಿರಿಯ ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿ ಆರೋಪದಡಿ ಐಪಿಸಿ ಸೆಕ್ಷನ್ 304-ಎಯಡಿ ಕೇಸು ದಾಖಲಿಸಲಾಗಿದೆ.
ಕಂಪೆನಿಯ ಅಧ್ಯಕ್ಷ ಡಾ.ಪ್ರಕಾಶ್ ಮೊದ, ಕಾರ್ಯಕಾರಿ ನಿರ್ದೇಶಕ ಡಾ.ವಿಶಾಲ್ ಮೊದ, ನಿರ್ದೇಶಕ ಡಾ.ತೇಜಸ್ ಕರಮ್ತ ಅವರನ್ನು ಬಂಧಿಸಲಾಗಿದೆ ಎಂದು ರಾಜಕೋಟ್ ಮಾಲ್ವಿಯಾ ನಗರ ಪೊಲೀಸರು ತಿಳಿಸಿದ್ದಾರೆ.
ರಾಜಕೋಟ್ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಮೂವರು ಹಿರಿಯ ಅಧಿಕಾರಿಗಳ ಬಂಧನ
ವಾಣಿಜ್ಯ ಜಾಹಿರಾತು
ವಾಣಿಜ್ಯ ಜಾಹಿರಾತು