ವಾಣಿಜ್ಯ ಜಾಹಿರಾತು
ಮಂಗಳೂರು: ಜುಲೈ 4 ರ ಮಧ್ಯರಾತ್ರಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಆಗಲಿದೆ ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಜುಲೈ 4ರ ಬಳಿಕ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಕೂಡಲೇ ಮಧ್ಯರಾತ್ರಿಯಿಂದ ಜಿಲ್ಲೆಯ ಎಲ್ಲಾ ಗಡಿಗಳನ್ನು ಸಂಪೂರ್ಣ ಮುಚ್ಚಲಾಗುವುದು.
ಆದ್ದರಿಂದ ಜಿಲ್ಲೆಗೆ ಆಗಮಿಸುವವರು ಅಥವಾ ಹೊರಹೋಗುವವರು ಈ ಕುರಿತು ಎಚ್ಚರಿಕೆ ವಹಿಸುವಂತೆ ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿವೆ .ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಡಳಿತ ಇದೊಂದು ಗಾಳಿ ಸುದ್ದಿಯಾಗಿದ್ದು ಅಂತಹ ಯಾವುದೇ ರೀತಿಯ ನಿರ್ಧಾರವನ್ನು
ಜಿಲ್ಲಾಡಳಿತ ಈವರೆಗೆ ಕೈಗೊಂಡಿಲ್ಲ ಎಂದು ಹೇಳಿದೆ.
ವಾಣಿಜ್ಯ ಜಾಹಿರಾತು