ಮಂಗಳೂರು: ನಗರದ ಲಾಡ್ಜ್ ಒಂದರಲ್ಲಿ ಇಂದು(ಫೆ.8) ದಂಪತಿಯ ಮೃತದೇಹ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೇರಳ ಮೂಲದ ರವೀಂದ್ರ (55), ಸುಧಾ (50) ಮೃತ ದಂಪತಿ.
ಕೇರಳದಲ್ಲಿ ಬಟ್ಟೆ ವ್ಯಾಪಾರಿಗಳಾಗಿದ್ದ ಮೃತ ದಂಪತಿಗಳು ಫೆ.6ರಂದು ಮಂಗಳೂರಿನ ಲಾಡ್ಜ್ ನಲ್ಲಿ ರೂಂ ಬಾಡಿಗೆ ಪಡೆದಿದ್ದರು. ರೂಮ್ ಬಾಡಿಗೆ ಪಡೆದು ಎರಡು ದಿನ ಕಳೆದರು ರೂಮ್ ನಿಂದ ದಂಪತಿಗಳು ಹೊರ ಬರದಿದ್ದಾಗ ಲಾಡ್ಜ್ ಸಿಬ್ಬಂದಿಗೆ ಕರೆ ಮಾಡಿದ್ದು, ಬಾಗಿಲು ಬಡಿದಿದ್ದಾರೆ. ಆದ್ರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ಬಂದು ಬಾಗಿಲು ತೆಗೆದು ನೋಡಿದಾಗ ಮೃತ ದಂಪತಿಗಳ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಲಾಡ್ಜ್ ಬಾಡಿಗೆಗೆ ಪಡೆದ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿದ್ದು ಲಾಡ್ಜ್ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ. ಕೇರಳ ಮೂಲದವರಾಗಿದ್ದು ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.