ವಾಣಿಜ್ಯ ಜಾಹಿರಾತು
ಕಡಬ:ಇತ್ತಂಡಗಳ ನಡುವೆ ಉಂಟಾದ ವಾಗ್ವಾದದ ಹಿನ್ನಲೆ ಯುವಕನೊಬ್ಬ ಚೂರಿ ಇರಿತಕ್ಕೊಳಗಾದ ಘಟನೆ ಕಡಬ ತಾಲೂಕಿನ ಆತೂರಿನಲ್ಲಿ ನಿನ್ನೆ ಸಂಜೆ ನಡೆದಿದೆ.
ಚೂರಿ ಇರಿತಕ್ಕೊಳಗಾದ ಯುವಕನನ್ನು ಆತೂರು ಜನತಾ ಕಾಲೊನಿ ನಿವಾಸಿ ನವಾಝ್ ಎಂದು ಗುರುತಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ಯುವಕನನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ವಾಣಿಜ್ಯ ಜಾಹಿರಾತು