ವಾಣಿಜ್ಯ ಜಾಹಿರಾತು

ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಿಥುನ್ ರೈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಮಿಥುನ್ ರೈ ಹೇಳಿಕೆಯ ಕುರಿತು ಸಾಕಷ್ಟು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಿಥುನ್ ರೈ ರನ್ನು ನಟ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಿಥುನ್ ರೈ ಹೇಳಿಕೆಯ ಕುರಿತು ಸೋಷಿಯಲ್ ಮೀಡಿಯಾದಲ್ಲಿ ರಕ್ಷಿತ್ ಶೆಟ್ಟಿ ಬರೆದುಕೊಂಡಿದ್ದಾರೆ.  ಮಿಥುನ್ ರೈ ಹೆಸರನ್ನು ಬಳಸದೇ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ. ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಮಿಥುನ್ ರೈ ಹೆಸರು ಬಳಸದೇ ಇದ್ದರೂ, ಇವರಿಗೆ ಕೊಟ್ಟ ಪ್ರತಿಕ್ರಿಯೆ ಎನ್ನುವುದು ಸ್ಪಷ್ಟವಾಗುತ್ತದೆ.

ಸಾಮಾನ್ಯವಾಗಿ ರಾಜಕೀಯ ವ್ಯಕ್ತಿಗಳ ಹೇಳಿಕೆಗಳಿಗೆ ರಕ್ಷಿತ್ ಶೆಟ್ಟಿ ಈವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಸ್ವತಃ ತಮ್ಮ ಮೇಲೆಯೇ ಹಲವರು ನೆಗೆಟಿವ್ ಕಾಮೆಂಟ್ ಮಾಡಿದಾಗಲೂ ರಕ್ಷಿತ್ ಮೌನವಹಿಸಿದ್ದರು. ಆದರೆ, ಉಡುಪಿ ಮಠಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.