ಕಾಂತಾರ ಸಿನಿಮಾದ ಬಳಿಕ ನಟ ರಿಷಬ್ ಶೆಟ್ಟಿ ದೇಶ, ವಿದೇಶದಲ್ಲೂ ಖ್ಯಾತಿ ಘಳಿಸಿದ್ದಾರೆ. ಸದ್ಯ ನಟ ರಿಷಬ್ ಶೆಟ್ಟಿ ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವದ ‘ಅತ್ಯಂತ ಭರವಸೆಯ ನಟ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತುಳುನಾಡಿನ ಸಂಸ್ಕೃತಿಯಲ್ಲಿ ಮೂಡಿ ಬಂದಿದ್ದ ಕಾಂತಾರ ಸಿನಿಮಾದ ಸಕ್ಸಸ್ ಇದೀಗ ರಿಷಬ್ ಶೆಟ್ಟಿ ಅವರನ್ನು ನ್ಯಾಷನಲ್ ಸ್ಟಾರ್ ಆಗಿ ಮಾಡಿದೆ. ಕಾಂತಾರ ಸಿನಿಮಾ ಸೂಪರ್ ಸಕ್ಸಸ್ ಆಗಿದ್ದು ಕೋಟಿ ಕೋಟಿ ಕಲೆಕ್ಷನ್ ಮಾಡಿದೆ. ಇದೀಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವದ ‘ಅತ್ಯಂತ ಭರವಸೆಯ ನಟ’ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡಿದ್ದಾರೆ.
ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್ ಶೆಟ್ಟಿಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.