ವಾಣಿಜ್ಯ ಜಾಹಿರಾತು
ಸ್ಯಾಂಡಲ್ ವುಡ್ ಸಿನಿಮಾ ರಂಗದ ಖ್ಯಾತ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಇಂದು ಆಪ್ತರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜೋಡಿ ಸಪ್ತಪದಿ ತುಳಿದಿದ್ದಾರೆ.
ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇತ್ತೀಚೆಗೆ ಎಂಗೇಜ್ ಮೆಂಟ್ ಮಾಡಿಕೊಂಡು ಅಚ್ಚರಿ ಮೂಡಿಸಿದ್ದರು. ಇದೀಗ ಜೋಡಿ ಹಕ್ಕಿಗಳು ಗರುಹಿರಿಯರು, ಆಪ್ತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಡಾಲಿ ಧನಂಜಯ್, ಶಿವರಾಜ್ಕುಮಾರ್, ಅಮೃತಾ ಅಯ್ಯಂಗಾರ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸಿಂಹಪ್ರಿಯಾ ಜೋಡಿಯ ಮದುವೆಗೆ ಹಾಜರಾಗಿ ನವ ಜೋಡಿಗಳಿಗೆ ಶುಭ ಹಾರೈಸಿದರು. ಸಿನಿಮಾರಂಗದ ಸ್ನೇಹಿತರಿಗೆ ಮತ್ತು ಗಣ್ಯರಿಗೆ ಜ.28ರಂದು ಬೆಂಗಳೂರಿನಲ್ಲಿ ಆರತಕ್ಷತೆ ಹಮ್ಮಿಕೊಂಡಿದ್ದಾರೆ.
ವಾಣಿಜ್ಯ ಜಾಹಿರಾತು