ವಾಣಿಜ್ಯ ಜಾಹಿರಾತು
ಮೂಡುಬಿದಿರೆ: ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಯ ದಿನಾಂಕ ಬದಲಾವಣೆ ಮಾಡಲಾಗಿದೆ. ಆಳ್ವಾಸ್ ನುಡಿಸಿರಿ ಸಮ್ಮೇಳನ ಡಿ. 21 , 22 ಮತ್ತು 23ರಂದು ನಡೆಸಲು ತೀರ್ಮಾನಿಸಲಾಗಿದೆ.
ಸ್ಕೌಟ್ಸ್ ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುವ ಸುವರ್ಣಾವಕಾಶ ನಮ್ಮ ಪಾಲಿಗೆ ಒದಗಿ ಬಂದಿದೆ. ಈ ಎರಡೂ ಕಾರ್ಯಕ್ರಮಗಳು ಪರಸ್ಪರ ಪೂರಕವಾಗಿ ಏಕಕಾಲದಲ್ಲಿ ನಡೆದರೆ ಅದರಿಂದ ಹೆಚ್ಚಿನ ಪ್ರಯೋಜನ ದೊರೆಯಲಿದೆ. ಈ ಕಾರಣದಿಂದ ಕಾರ್ಯಕಾರಿ ಸಮಿತಿಯ ತೀರ್ಮಾನದಂತೆ ಆಳ್ವಾಸ್ ನುಡಿಸಿರಿ ಸಮ್ಮೇಳನ ಡಿ. 16,17,18ರ ಬದಲು ಡಿ. 21, 22, ಮತ್ತು 23ರಂದು ನಡೆಸಲು ತೀರ್ಮಾನಿಸಲಾಗಿದೆ.
ಬದಲಾದ ದಿನಾಂಕವನ್ನು ಗಮನಿಸಿ ಸಹಕರಿಸುವಂತೆ ಸಂಸ್ಥೆ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಣಿಜ್ಯ ಜಾಹಿರಾತು