ವಾಣಿಜ್ಯ ಜಾಹಿರಾತು
ಬಂಟ್ವಾಳ: ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆಯ ಅಡುಗೆಕೋಣೆ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.
ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ಸಾಕಷ್ಟು ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.
ನಿನ್ನೆ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗಲಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ 2 ಅಗ್ನಿಶಾಮಕ ದಳದ ವಾಹನಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದ ಅಡುಗೆ ಕೋಣೆ ದಾಸ್ತಾನು ಕೊಠಡಿ ಸಂಪೂರ್ಣವಾಗಿ ಭಸ್ಮವಾಗಿದೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ವಾಣಿಜ್ಯ ಜಾಹಿರಾತು