ಬಂಟ್ವಾಳ: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನಪ್ಪಿದ್ದು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ಬೈಪಾಸ್ ನಿವಾಸಿ ವಿದ್ಯುತ್ ಗುತ್ತಿಗೆದಾರ ಚಂದ್ರಶೇಖರ್ ಮೃತ ದುರ್ದೈವಿ. ಬಂಟ್ವಾಳದ ನಿವಾಸಿ ಇಡ್ಲಿ ಯೋಗೀಶ್ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಂದ್ರಶೇಖರ್ ಹಾಗೂ ಯೋಗೀಶಗ ಬೈಕಿನಲ್ಲಿ ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದಾಗ ರಾಯಿ ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದ ಹಿಂಬದಿ ಸವಾರ ಚಂದ್ರಶೇಖರ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಚಾಲಕ ಯೋಗೀಶ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಚಾಲಕನ ಅತಿವೇಗದ ಹಾಗೂ ಅಜಾಗರೂಕತೆಯ ಚಾಲನೆಯೆ ಘಟನೆಗೆ ಕಾರಣ ಎನ್ನಲಾಗಿದೆ. ಮೆಲ್ಕಾರ್ ಸಂಚಾರಿ ಠಾಣಾಧಿಕಾರಿ ಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.