ವಾಣಿಜ್ಯ ಜಾಹಿರಾತು

ಉಡುಪಿ: ಬಿಜೆಪಿ ತನ್ನ ರಾಜಕೀಯ ಉದ್ದೇಶಕ್ಕಾಗಿ ಧರ್ಮಗಳ ಮಧ್ಯೆ ಧ್ವೇಷ ಹರಡಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಹಿಂದುಳಿದ ಘಟಕದ ನೂತನ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಆಕ್ರೋಶ ಹೊರ ಹಾಕಿದ್ದಾರೆ. 

ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಹಲವು ವರ್ಷಗಳ ಕಾಲ ಆಡಳಿತದಲ್ಲಿದ್ದ ಕಾಂಗ್ರೆಸ್ ಪಕ್ಷವು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೆ ತಂದ ಎಲ್ಲಾ ಯೋಜನೆಗಳು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿದೆ. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ರಾಜು ಪೂಜಾರಿ, ಶಿವಾಜಿ ಸುವರ್ಣ, ಗೀತಾ ವಾಗ್ಳೆ, ಇಸ್ಮಾಯಿಲ್ ಆತ್ರಾಡಿ, ಬಿ. ನರಸಿಂಹ ಮೂರ್ತಿ, ಬಿ. ಕುಶಲ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಅಣ್ಣಯ್ಯ ಸೇರಿಗಾರ್, ಕೀರ್ತಿ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಯ ಕುಮಾರ್, ಕಿಶೋರ್ ಕುಮಾರ್, ಶಂಕರ್ ಕುಂದರ್, ಉದ್ಯಾವರ ನಾಗೇಶ್ ಕುಮಾರ್, ಪ್ರಶಾಂತ್ ಜತ್ತನ್ನ, ಸುನೀಲ್ ಬಂಗೇರ, ಎಲ್ಲೂರು ಶಶಿಧರ್ ಶೆಟ್ಟಿ ಹರೀಶ್ ಶೆಟ್ಟಿ ಪಾಂಗಾಳ ಮೊದಲಾದವರು ಉಪಸ್ಥಿತರಿದ್ದರು.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.