ವಾಣಿಜ್ಯ ಜಾಹಿರಾತು
ಬ್ರಹ್ಮಾವರ: ಒಂಟಿಯಾಗಿ ವಾಸವಾಗಿರುವ ಕೊರಗಿನಲ್ಲಿ ಇಲಿ ಪಾಷಣ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಹಂದಾಡಿ ಗ್ರಾಮದ ಬೇಳೂರುಜೆಡ್ಡು ಎಂಬಲ್ಲಿ ನಡೆದಿದೆ.
ಮೃತರನ್ನು ಬಿನ್ಸಿ (30) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಪತಿ ಶೈಜು ಥೋಮಸ್ ದುಬೈಯಲ್ಲಿ ಉದ್ಯೋಗದಲಿದ್ದಾರೆ. ಬಿನ್ಸಿ ಮಗಳೊಂದಿಗೆ ಬ್ರಹ್ಮಾವರದ ಮನೆಯ ಒಂದನೇ ಮಹಡಿಯಲ್ಲಿ ಹಾಗೂ ಅವರ ಅತ್ತೆ, ಮಾವ ಮನೆಯ ಕೆಳ ಅಂತಸ್ತಿನಲ್ಲಿ ವಾಸವಾಗಿದ್ದರು.
ಮೇಲಂತಸ್ತಿನಲ್ಲಿ ಮಗುವಿನೊಂದಿಗೆ ಒಂಟಿಯಾಗಿ ವಾಸವಾಗಿರುವ ಕೊರಗಿನಲ್ಲಿ ಬಿನ್ಸಿ ಅ.26ರಂದು ರಾತ್ರಿ ಡೆತ್‌ನೋಟ್ ಬರೆದಿಟ್ಟು ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ನ.5ರಂದು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
ವಾಣಿಜ್ಯ ಜಾಹಿರಾತು