ವಾಣಿಜ್ಯ ಜಾಹಿರಾತು
ಉಳ್ಳಾಲ: ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು ಮತ್ತೋರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಲ್ಯ- ಅಡ್ಕ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.
ಉಪ್ಪಳ ಹಿದಾಯತ್ ನಗರ ನಿವಾಸಿ ಬಷೀರ್ ಅಹಮ್ಮದ್ (22) ಮೃತ ದುರ್ದೈವಿಯಾಗಿದ್ದು ಗಾಯಗೊಂಡಿರುವ ಮತ್ತೋರ್ವ ಪ್ರಯಾಣಿಕನ ಗುರುತು ಪತ್ತೆಯಾಗಿಲ್ಲ. ಘಟನೆಯಿಂದ ಕಾರಿನಲ್ಲಿದ್ದ ಕೇರಳ ಕಣ್ಣೂರು ನಿವಾಸಿ, ವೈದ್ಯ ವಿದ್ಯಾರ್ಥಿನಿ ಫಾತಿಮ ಹಾಗೂ ರೇವತಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಣಾಪಾಯದಿಂದ ಪಾರಾಗಿದ್ದಾರೆ.
ಮೊದಲಿಗೆ ಕಾರು ರಸ್ತೆ ವಿಭಜಕವನ್ನು ಏರಿ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರು ಚಾಲಕ ಬಷಾರ ಅಹಮ್ಮದ್ ತಲೆ ಹಾಗೂ ದೇಹಕ್ಕೆ ಗಂಭೀರವಾಗಿ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರನ್ನು ಸ್ಥಳೀಯರು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವಾಣಿಜ್ಯ ಜಾಹಿರಾತು