Tuesday, May 30, 2023

ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿಷೇಧ: ಕದ್ರಿ ದೇವಸ್ಥಾನದಲ್ಲಿ ಅಳವಡಿಸಿದ್ದ ಬ್ಯಾನರ್ ತೆರವು

ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ವಿಹಿಂಪ-ಬಜರಂಗದಳ ವತಿಯಿಂದ ಅಳವಡಿಸಲಾಗಿದ್ದು ಬ್ಯಾನರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈಗಾಗಲೇ ಜಾತ್ರೆ ಆರಂಭವಾಗಿದ್ದು 21ರ ವರೆಗೆ ಜಾತ್ರೆ ನಡೆಯಲಿದೆ. ಈ ನಡುವೆ ಗುರುವಾರ ಕ್ಷೇತ್ರದಲ್ಲಿ ಬ್ಯಾನರ್‌ ಕಂಡು ಬಂದಿದೆ....

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಜ.21ರಿಂದ ವಿಜಯ ಸಂಕಲ್ಪ ಅಭಿಯಾನ: ಶಾಸಕ ಭರತ್ ಶೆಟ್ಟಿ

ಸುರತ್ಕಲ್: ಸರ್ಕಾರದ ಸಾಧನೆ ಬಿಂಬಿಸಲು ಹಾಗೂ ಜನಕಲ್ಯಾಣದೆಡೆಗೆ ಬಿಜೆಪಿಯ ಬದ್ಧತೆ ಸಾರಲು ಪ್ರತಿ ಬೂತ್‌ನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆ ಸಾರುವ ಮತ್ತು ಯೋಜನೆಗಳ ಮಾಹಿತಿ ನೀಡಲು ಜ.21ರಿಂದ ವಿಜಯ ಸಂಕಲ್ಪ ಅಭಿಯಾನ ಆಯೋಜಿಸಲಾಗಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಜ.21ರಂದು ಬೆಳಿಗ್ಗೆ...

ಸ್ವಾರ್ಥ ಕಾಂಗ್ರೆಸ್ ರಾಜಕೀಯಕ್ಕೆ ಮತದಾರ ತಕ್ಕ ಪಾಠ ಕಲಿಸಬೇಕು: ಡಾ.ಅಶ್ವತ್ಥ ನಾರಾಯಣ

ಬಂಟ್ವಾಳ: ರಾಜ್ಯದಲ್ಲಿ ಅಭಿವೃದ್ಧಿ ಬಗ್ಗೆ ಯಾವುದೇ ಚಿಂತೆ ಇಲ್ಲದೆ ಕೇವಲ ವಂಶ ರಾಜಕಾರಣ ಮತ್ತು ತುಷ್ಟೀಕರಣದ ಮೂಲಕ ಸಮಾಜ ಒಡೆದ ಸ್ವಾರ್ಥ ಕಾಂಗ್ರೆಸ್‌ ಗೆ ಈ ಬಾರಿಯೂ ಮತದಾರ ತಕ್ಕ ಪಾಠ ಕಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದರು. ಬಂಟ್ವಾಳ ಕ್ಷೇತ್ರ...

ಹೆದ್ದಾರಿ ಅಪಘಾತಗಳಿಗೆ ನವಯುಗ ನೇರ ಹೊಣೆ: ಉಡುಪಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ

0
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲೇ ಅಪಘಾತವಾಗಿ ಜೀವಹಾನಿ ಸಂಭವಿಸಿದರೆ ರಸ್ತೆ ನಿರ್ಮಿಸಿರುವ ನವಯುಗ ಕಂಪೆನಿಯನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚಿಂದ್ರ...

‘ವೀರ ರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ನಿವೃತ್ತ ಪ್ರಾಧ್ಯಾಪಕಿ ಡಾ.ಪಾರ್ವತಿ ಜಿ. ಐತಾಳ್ ಆಯ್ಕೆ

ಮಂಗಳೂರು: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ವತಿಯಿಂದ ನೀಡುವ ‘ವೀರ ರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ.ಪಾರ್ವತಿ ಜಿ. ಐತಾಳ್ ಹಾಗೂ ‘ವೀರರಾಣಿ ಅಬ್ಬಕ್ಕ ಪುರಸ್ಕಾರ’ಕ್ಕೆ ಪಾಡ್ದನದ ಮೇರು ಪ್ರತಿಭೆ ಭವಾನಿ ಅವರನ್ನು ಆಯ್ಕೆ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಉತ್ಸವ...

ಬಂಟ್ವಾಳ: ಅಪರಿಚಿತ ಕಾರು ಪತ್ತೆ ಪ್ರಕರಣ: ಮುಂದುವರಿದ ತನಿಖೆ

ಬಂಟ್ವಾಳ: ಕಳೆದ ಹಲವು ದಿನಗಳಿಂದ ಬಿ.ಸಿ.ರೋಡಿನ ಫ್ಲೈ ಓವರ್ ತಳಭಾಗದಲ್ಲಿ ನಿಂತಿರುವ ಇನ್ನೋವಾ ಕ್ರಿಸ್ಟ ಕಾರು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನ ಮಾಲಕರ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಮಾಲಿಕರಿಲ್ಲದೆ ಕಾರು ಅನಾಥವಾಗಿ ನಿಂತಿದ್ದು...

ಮಂಗಳೂರು: ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿಗಳ ಹತ್ಯೆಗೆ ಯತ್ನ

ಮಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಕೊಲೆಗೆ ಯತ್ನಿಸಿದ ಘಟನೆ ಅರ್ಕುಲ ಗ್ರಾಮದ ತುಪ್ಪೆಕಲ್ಲು ಎಂಬಲ್ಲಿ ನಡೆದಿದೆ. ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಕಾನ್‌ ಸ್ಟೇಬಲ್ ಗಳಾದ ಮಲ್ಲಿಕಾರ್ಜುನ ಅಂಗಡಿ ಹಾಗೂ ಪ್ರದೀಪ್‌ ನಾಗನಗೌಡ ಅವರು ಜ.19ರ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದರು. ಜ.20ರ ಮುಂಜಾನೆ 2...

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವತಿ ಆತ್ಮಹತ್ಯೆ

ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ತೆಳ್ಳಾರು ನಿವಾಸಿ ಪ್ರೀತಿಕಾ (34) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಪ್ರೀತಿಕಾ ಕಳೆದ 7 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಅದಕ್ಕಾಗಿ ಔಷಧಿ ಪಡೆಯುತ್ತಿದ್ದರೂ ಗುಣಮುಖವಾಗಿರಲಿಲ್ಲ. ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗುವುದಕ್ಕಾಗಿ...

ವಿಟ್ಲ: ಜಾತ್ರೆಯಲ್ಲಿ ಮಳಿಗೆ ಹಾಕಿದ್ದ ವ್ಯಕ್ತಿಯ ಮೇಲೆ ಹಲ್ಲೆ, ಪತ್ನಿಯ ಮಾನಭಂಗಕ್ಕೆ ಯತ್ನ: ಪ್ರಕರಣ ದಾಖಲು

ಬಂಟ್ವಾಳ: ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಪ್ರಯುಕ್ತ ಹಾಕಲಾಗಿದ್ದ ಫ್ಯಾನ್ಸಿ ಅಂಗಡಿಯೊಂದರ ಬಳಿ ಬಂದ ತಂಡವೊಂದು ಅಂಗಡಿ ಮಾಲೀಕರಿಗೆ ಹಲ್ಲೆ ನಡೆಸಿ, ಅವರ ಪತ್ನಿಯ ಮಾನಭಂಗಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ನೇರ್ಲಾಜೆ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಚಾರ್ಜ್ ಶೀಟ್ ಸಲ್ಲಿಸಿದ ಎನ್ ಐ ಎ

0
ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!