ಚೊಚ್ಚಲ ಸಿನಿಮಾ ಬಿಡುಗಡೆ ಹೊಸ್ತಿಲಲ್ಲೆ ನಿರ್ದೇಶಕ ನಿಧನ
ಹೆಪಟೈಟಿಸ್ ಕಾಯಿಲೆಯಿಂದ ಬಳಲುತ್ತಿದ್ದ ಮಲಯಾಳಂ ನಿರ್ದೇಶಕ ಜೊಸೆಫ್ ಮನು ಜೇಮ್ಸ್ ಸಣ್ಣ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಹೆಪಟೈಟಿಸ್ ಕಾಯಿಲೆಯಿಂದ ಬಳಲುತ್ತಿದ್ದ ಜೊಸೆಫ್ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.
31 ವರ್ಷ ವಯಸ್ಸಿನ ಜೊಸೆಫ್ ಮನು ಜೇಮ್ಸ್ ನಿರ್ದೇಶನದ ಮೊದಲ ಸಿನಿಮಾ ‘ನಾನ್ಸಿ ರಾಣಿ’ ಇನ್ನೇನು ಬಿಡುಗಡೆಯ ಹೊಸ್ತಿಲಿನಲ್ಲಿತ್ತು. ಆದರೆ...
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ದೊರೆ ಭಗವಾನ್ ನಿಧನ
ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ ದೊರೈ ಹಾಗೂ ಭಗವಾನ್ ಜೋಡಿ ಸಾಕಷ್ಟು ಖ್ಯಾತಿಯಾಗಿತ್ತು. ಈಗಾಗಲೇ ದೊರೆ ನಿಧನರಾಗಿದ್ದು, ಇದೀಗ ಭಗವಾನ್ ಕೂಡ ನಿಧನರಾಗಿದ್ದಾರೆ.
1933ರಲ್ಲಿ...
ರಜನಿಕಾಂತ್ ಸಿನಿಮಾದಲ್ಲಿ ಸಾಧು ಕೋಕಿಲಾ ನಟನೆ: ಮಂಗಳೂರಿನ ಗುತ್ತಿನ ಮನೆಯಲ್ಲಿ ಶೂಟಿಂಗ್
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಸಿನಿಮಾದ ಶೂಟಿಂಗ್ ಮಂಗಳೂರಿನಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ರಜನಿಕಾಂತ್ ಮಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಈಗಾಗಲೇ ಖ್ಯಾತ ನಟ ಶಿವರಾಜ್ ಕುಮಾರ್ ಜೈಲರ್ ಸಿನಿಮಾ ತಂಡ ಸೇರಿಕೊಂಡಿದ್ದು ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ...
ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವದ ‘ಅತ್ಯಂತ ಭರವಸೆಯ ನಟ’ ಪ್ರಶಸ್ತಿಗೆ ಭಾಜನರಾದ ನಟ ರಿಷಬ್ ಶೆಟ್ಟಿ
ಕಾಂತಾರ ಸಿನಿಮಾದ ಬಳಿಕ ನಟ ರಿಷಬ್ ಶೆಟ್ಟಿ ದೇಶ, ವಿದೇಶದಲ್ಲೂ ಖ್ಯಾತಿ ಘಳಿಸಿದ್ದಾರೆ. ಸದ್ಯ ನಟ ರಿಷಬ್ ಶೆಟ್ಟಿ ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವದ 'ಅತ್ಯಂತ ಭರವಸೆಯ ನಟ' ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತುಳುನಾಡಿನ ಸಂಸ್ಕೃತಿಯಲ್ಲಿ ಮೂಡಿ ಬಂದಿದ್ದ ಕಾಂತಾರ ಸಿನಿಮಾದ ಸಕ್ಸಸ್ ಇದೀಗ...
ಮಂಗಳೂರಿನಲ್ಲಿ ‘ಜೈಲರ್’ ಚಿತ್ರದ ಚಿತ್ರೀಕರಣ ಸ್ಥಳದ ದೃಶ್ಯ
ಜೈಲರ್ ಸಿನಿಮಾದ ಶೂಟಿಂಗ್ ಗಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮಂಗಳೂರಿಗೆ ಆಗಮಿಸಿದ್ದಾರೆ. ರಜನಿಕಾಂತ್ ಜೊತೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ‘ಜೈಲರ್’ ಸಿನಿಮಾದ ಶೂಟಿಂಗ್ ಪಿಲಿಕುಳದ ಗುತ್ತಿನ ಮನೆಯಲ್ಲಿ ನಡೆಯುತ್ತಿದ್ದು, ಕರಾವಳಿಯನ್ನು ಬಿಂಬಿಸುವಂತಹ ದೃಶ್ಯಗಳನ್ನು ಇಲ್ಲಿ ಸೆರೆ...
ಮಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್
ಕಳೆದ ಕೆಲ ದಿನಗಳ ಹಿಂದಷ್ಟೇ ಮಂಗಳೂರಿಗೆ ಆಗಮಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಭಾನುವಾರ ರಾತ್ರಿ ಮತ್ತೆ ಮಂಗಳೂರಿಗೆ ಬಂದಿಳಿದಿದ್ದಾರೆ. ಖಾಸಗಿ ಕಾರ್ಯಕ್ರಮ ಹಾಗೂ ಸಿನಿಮಾದ ಶೂಟಿಂಗ್ ಗಾಗಿ ತಲೈವ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ರಜನಿಕಾಂತ್ ಬರುತ್ತಿದ್ದಾರೆ ಎಂದು ತಿಳಿದ ಅಭಿಮಾನಿಗಳು ಏರ್...
ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ!
ಭಾರತೀಯ ಚಿತ್ರರಂಗ ಖ್ಯಾತ ಗಾಯಕಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತೆ ವಾಣಿ ಜಯರಾಮ್ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಚೆನ್ನೈನ ನುಂಗಂಬಕ್ಕಂನಲ್ಲಿರುವ ನಿವಾಸದಲ್ಲಿ ವಾಣೀ ಜಯರಾಮ್ ನಿಧನರಾಗಿದ್ದು ವಾಣಿ ಅವರ ನಿಧನಕ್ಕೆ ಕಾರಣ ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ, ಮನೆಯಲ್ಲಿ ಆಯತಪ್ಪಿ ಬಿದ್ದಿದ್ದ ವಾಣಿ...
ಯುವಕನ ಕೆನ್ನೆಗೆ ಹೊಡೆದ ಸಾನ್ಯಾ ಐಯ್ಯರ್: ಕಂಬಳ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ನಟಿ
ಮಂಗಳೂರು: ಪುಟ್ಟಗೌರಿ ಖ್ಯಾತಿಯ ನಟಿ ಸಾನ್ಯಾ ಐಯ್ಯರ್ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಕಂಬಳ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ ಯುವಕನೋರ್ವ ಸಾನ್ಯಾ ಜೊತೆ ಕಿರಿಕ್ ಮಾಡಿಕೊಂಡಿದ್ದು ಈ ವೇಳೆ ಸಾನ್ಯಾ ಯುವಕನ ಕೆನ್ನೆಗೆ ಹೊಡೆದಿದ್ದಾರೆ. ಇದರಿಂದ ಕೋಪಗೊಂಡ ಯುವಕ...
ಮೊದಲ ಬಾರಿಗೆ ಸಾರ್ವಜನಿಕವಾಗಿ ಮಗಳ ಮುಖ ರಿವೀಲ್ ಮಾಡಿದ ನಟಿ ಪ್ರಿಯಾಂಕ ಚೋಪ್ರಾ
ವಾಷಿಂಗ್ಟನ್: ಖ್ಯಾತ ನಟಿ ಪ್ರಿಯಾಂಕ ಚೋಪ್ರಾ ಸರೋಗಸಿ ಮೂಲಕ ಹೆಣ್ಣು ಮಗುವನ್ನು ಪಡೆದುಕೊಂಡಿದ್ದಾರೆ. ಇದುವರೆಗೂ ಮಗುವಿನ ಮುಖವನ್ನು ಎಲ್ಲೂ ರಿವೀಲ್ ಮಾಡದ ಪಿಂಕಿ ಇದೀಗ ಮೊದಲ ಭಾರಿಗೆ ಸಾರ್ವಜನಿಕವಾಗಿ ಮಗಳ ಮುಖವನ್ನು ತೋರಿಸಿದ್ದಾರೆ.
ಪ್ರಿಯಾಂಕ ಚೋಪ್ರಾ ಇದೀಗ ಮೊದಲ ಬಾರಿಗೆ ಮಗಳು ಮಾಲ್ತಿ ಮೇರಿ...
ಹಾಸ್ಯ ಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತ: ಆಸ್ಪತ್ರೆಗೆ ದಾಖಲು
ಮಂಗಳೂರು: ತುಳು ಭಾಷೆಯ ಖ್ಯಾತ ರಂಗಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರದ ಪಂಪ್ ವೆಲ್ ಬಳಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಅರವಿಂದ್ ಬೋಳಾರ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅತೀ ವೇಗವಾಗಿ ಬಂದ...