ಹೆಜಮಾಡಿ: ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಬದಿ ಕಮರಿಗೆ ಬಿದ್ದ ಖಾಸಗಿ ಬಸ್
ಪಡುಬಿದ್ರೆ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಹೆಜಮಾಡಿಯ ರಾಷ್ಟ್ರೀಯ ಹೆದ್ದಾರಿಯ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ವೇಗದೂತ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆಜಮಾಡಿಯ ಶ್ರೀ...
ಪ್ರಿನ್ಸೆಸ್ ಮಿರಾಲ್ ಹಡಗಿನಿಂದ ತೈಲ ಸೋರಿಕೆ ಭೀತಿ, ಕೆಲವರ ಆರೋಗ್ಯದಲ್ಲಿ ಏರುಪೇರು- ಸ್ಥಳೀಯರ ದೂರು
ಉಳ್ಳಾಲ: ಉಚ್ಚಿಲದ ಬಟ್ಟಂಪಾಡಿ ಕಡಲ ತೀರದಲ್ಲಿ ಮುಳುಗಡೆಯಾದ ವಿದೇಶಿ ಹಡಗಿನಿಂದ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆ ಕಂಡುಬಂದಿದ್ದು, ತೈಲ ಸೋರಿಕೆಯಿಂದ ಕೆಲವರಲ್ಲಿ ಆರೋಗ್ಯ ಸಮಸ್ಯೆ ಎದುರಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಕಳೆದ ಮೂರು ದಿನಗಳಿಂದ ತೈಲ ಸೋರಿಕೆಯಾಗಿ ಕೆಟ್ಟ ವಾಸನೆ ಬರುತ್ತಿದ್ದು, ಸಮುದ್ರದಲ್ಲಿ ತೈಲ...
ಮಂಗಳೂರು: ಅಗ್ನಿಪಥ್ ಯೋಜನೆ ರಾಜಕೀಯ ಪ್ರೇರಿತವಾದ ಬಿಜೆಪಿ ಅಸ್ತ್ರ-ಮಾಜಿ ಶಾಸಕ ಜೆ.ಆರ್ ಲೋಬೋ
ಮಂಗಳೂರು: ಅಗ್ನಿಪಥ್ ರಾಜಕೀಯ ಪ್ರೇರಿತವಾದ ಬಿಜೆಪಿ ಅಸ್ತ್ರವಾಗಿದೆ. ದೇಶವನ್ನು ನಾಶ ಮಾಡುವ ಅಗ್ನಿಪಥ್ ಯೋಜನೆಯನ್ನು ಎಲ್ಲರೂ ವಿರೋಧಿಸಬೇಕು ಎಂದು ಮಾಜಿ ಶಾಸಕ ಜೆ.ಆರ್ ಲೋಬೋ ಹೇಳಿದ್ದಾರೆ.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ...
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 198 ರೂ. ಇಳಿಕೆ-ಜುಲೈ 1ರಿಂದಲೇ ಪರಿಷ್ಕೃತ ದರ ಜಾರಿ
ನವದೆಹಲಿ: ಹೋಟೆಲ್ಗಳು, ರೆಸ್ಟೊರೆಂಟ್ಗಳು ಮತ್ತು ಇತರ ವ್ಯಾಪಾರ ಸಂಸ್ಥೆಗಳು ಬಳಸುವ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 198 ರೂಪಾಯಿ ಇಳಿಕೆಯಾಗಿದೆ.
ಜುಲೈ 1ರಿಂದ 198 ರೂಪಾಯಿ ಇಳಿಕೆಯಾಗಿದೆ. ಇದೀಗ 19 ಕೆ.ಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾಗಿದೆ. ಈ...
ದತ್ತಪೀಠದಲ್ಲಿ ಹಿಂದೂ ಅರ್ಚಕ ಹಾಗೂ ಮುಸ್ಲಿಮ್ ಮುಜಾವರರಿಗೆ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲು ಸಂಪುಟ ಸಭೆಯಲ್ಲಿ ಒಪ್ಪಿಗೆ
ಬೆಂಗಳೂರು: ಹಿಂದೂ ಹಾಗೂ ಮುಸ್ಲಿಮರು ಹಕ್ಕು ಪ್ರತಿಪಾದಿಸುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ (ಬಾಬಾ ಬುಡನ್ಗಿರಿ) ಹಿಂದೂ ಅರ್ಚಕ ಹಾಗೂ ಮುಸ್ಲಿಮ್ ಮುಜಾವರರಿಗೆ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲು ಅವಕಾಶ ನೀಡಲು ಸಂಪುಟ ಉಪ ಸಮಿತಿ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.
ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ...
ಮೂಡುಬಿದಿರೆ: ನಿರ್ಭೀತ ಪತ್ರಿಕೋದ್ಯಮಕ್ಕೆ ಹೆಸರಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟಿ ಹೆಸರಿನಲ್ಲಿ ಸರ್ಕಾರ ಪ್ರಶಸ್ತಿ ನೀಡುವಂತಾಗಬೇಕು-ಪತ್ರಕರ್ತ ವಸಂತ ಗಿಳಿಯಾರ್
ಮೂಡುಬಿದಿರೆ: ಸಮಾಜ ಕಂಟಕರ ಕೃತ್ಯಗಳ ಬಗ್ಗೆ ವರದಿ ಮಾಡಲು ಸತ್ಯದ ಬೆನ್ನತ್ತಿ ಸಾಗುವ ಪತ್ರಕರ್ತರು ಒತ್ತಡ, ಜೀವ ಬೆದರಿಕೆ ಎದುರಿಸಬೇಕಾಗುತ್ತದೆ, ಪ್ರಾಮಾಣಿಕ ವರದಿಗಾರರ ಹೆಸರಿನಲ್ಲಿ ಅವರಿಗೆ ಮಾಹಿತಿ ನೀಡುವವರು ಬ್ಲ್ಯಾಕ್ಮೆಲ್ ವ್ಯವಹಾರ ನಡೆಸುವ ಮೂಲಕ ಪ್ರಾಮಾಣಿಕ ಪತ್ರಕರ್ತರು ಸಂಕಷ್ಟ ಎದುರಿಸುತ್ತಾರೆ. ನಿರ್ಭೀತ ಪತ್ರಿಕೋದ್ಯಮಕ್ಕೆ...
ಮಂಗಳೂರು: ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯಿಂದ ಪತ್ರಿಕಾ ದಿನಾಚರಣೆ-ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ
ಮಂಗಳೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಶುಕ್ರವಾರದಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು.
ಕನ್ನಡದ ಪ್ರಥಮ ಪತ್ರಿಕೆ ಮಂಗಳೂರು ಸಮಾಚಾರ ಪತ್ರಿಕೆಯ ಸಂಸ್ಥಾಪಕ ಸಂಪಾದಕ ರೆ.ಹೆರ್ಮನ್...
ಅನುದಾನಿತ ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಹುದ್ದೆ ಭರ್ತಿಗೆ ರಾಜ್ಯಸರಕಾರ ಅನುಮತಿ
ಬೆಂಗಳೂರು: ಅನುದಾನಿತ ಪ್ರೌಢಶಾಲೆಗಳಲ್ಲಿ 2015ರ ಡಿಸೆಂಬರ್ 31ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಮುಂದುವರೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ
ಕೋವಿಡ್ 19ರಿಂದಾಗಿ ಉದ್ಭವಿಸಿದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯ ಸಾಧಿಸುವ...
ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಅಲೋಕ್ ಅರಾಧೆ ನೇಮಕ
ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರನ್ನು ಜುಲೈ 3ರಿಂದ ಅನ್ವಯವಾಗುವಂತೆ ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ಆದೇಶ ಮಾಡಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರು ಜುಲೈ 2ರಂದು ನಿವೃತ್ತಿ ಹೊಂದುತ್ತಿದ್ದು, ಇಂದು...
ಮಂಗಳೂರು ನಗರ ಡಿಸಿಪಿಯಾಗಿ ಅಂಶು ಕುಮಾರ್ ನೇಮಕ
ಮಂಗಳೂರು: ನಗರದ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಅಂಶು ಕುಮಾರ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ನೀಡಿದೆ.
ಉಡುಪಿ ಜಿಲ್ಲೆಯ ಕರಾವಳಿ ಭದ್ರತಾ ವಿಭಾಗದ ಎಸ್ ಪಿಯಾಗಿ ಸೇವೆ ಸಲ್ಲಿಸಿದ್ದರು. ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.
ಈ ಹಿಂದೆ ನಗರದಲ್ಲಿ...