Sunday, March 26, 2023

10 ಕೋಟಿ ಕೋವಿಶೀಲ್ಡ್ ಡೋಸ್ ಖರೀದಿಗೆ ಕೇಂದ್ರದ ಆದೇಶ

ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರಕ್ಕೆ ಕಡಿವಾಣ ಹಾಕಲು ಲಸಿಕೆ ಅಭಿಯಾನ ಮತ್ತಷ್ಟು ವೇಗ ಪಡೆದುಕೊಳ್ಳುತ್ತಿದೆ. ಕೋವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್ಐಐ)ಗೆ ಕೇಂದ್ರ ಸರ್ಕಾರ ಹೊಸ ಖರೀದಿ ಆದೇಶ ನೀಡಿದೆ. ಆಕ್ಸ್ ಫರ್ಡ್ -ಅಸ್ಟ್ರಾಜೆನೆಕಾ ಸಂಸ್ಥೆಯ 10 ಕೋಟಿ ಕೋವಿಶೀಲ್ಡ್...

ರಾಜಕೋಟ್ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಮೂವರು ಹಿರಿಯ ಅಧಿಕಾರಿಗಳ ಬಂಧನ

ಅಹ್ಮದಾಬಾದ್: ಗುಜರಾತಿನ ರಾಜಕೋಟ್ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿ ಪೊಲೀಸರು ಆಸ್ಪತ್ರೆಯ ಮೂವರು ಹಿರಿಯ ಅಧಿಕಾರಿಗಳನ್ನು ಬಂಧಿಸಿದ್ದಾರೆ. ನ.27ರಂದು ಉದಯ್ ಶಿವಾನಂದ್ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ರೋಗಿಗಳು ಸಜೀವ...

ದೆಹಲಿಯಲ್ಲಿ ಪೆಟ್ರೋಲ್ ಮೇಲಿನ ವ್ಯಾಟ್ ದರ 8 ರೂ. ಇಳಿಕೆ: ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ

ನವದೆಹಲಿ: ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಮೌಲ್ಯ ವರ್ಧಿತ ತೆರಿಗೆ ಅನ್ನು ಶೇ.30ರಿಂದ 19.40ಕ್ಕೆ ಇಳಿಕೆ ಮಾಡಿರುವುದಾಗಿ ದೆಹಲಿ ಸರ್ಕಾರ ಘೋಷಿಸಿದ್ದು, ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 8 ರೂಪಾಯಿ ಇಳಿಕೆಯಾದಂತಾಗಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ...

ಎಲ್ಗಾರ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮಾನವ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿ ನಿಧನ, ಟ್ವಿಟರ್’ನಲ್ಲಿ ಸಾಮಾಜಿಕ ಹೋರಾಟಗಾರರ ಆಕ್ರೋಶ

ನವದೆಹಲಿ: ಎಲ್ಗಾರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ ಸ್ಟ್ಯಾನ್ ಸ್ವಾಮಿ ಮುಂಬೈನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಸ್ಟ್ಯಾನ್ ಸ್ವಾಮಿ ನಿಧನಕ್ಕೆ ವಿರೋಧ ಪಕ್ಷಗಳು, ಸಾಮಾಜಿಕ ಹೋರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ. ‘ಎನ್‍ಐಎ, ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ, ಬಿಜೆಪಿ ಮತ್ತು ನ್ಯಾಯಾಂಗವು ಸ್ಟ್ಯಾನ್ ಸ್ವಾಮಿಯನ್ನು ಕೊಲೆ ಮಾಡಿದೆ’...

ರಾಜ್ಯದ ಹಲವೆಡೆ ಭಾರೀ ಮಳೆ, ಜೂನ್‍ 17ರ ವರೆಗೆ ದಕ್ಷಿಣಕನ್ನಡ, ಉಡುಪಿ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

0
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜೂ.17ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಸೇರಿಂದತೆ ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಜೂ,16...

ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ: ರಾಷ್ಟ್ರಪತಿಯಿಂದ ಅಂಗೀಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತರುತ್ತಿರುವ ಕೃಷಿ ಸುಗ್ರೀವಾಜ್ಞೆ ವಿಧೇಯಕವನ್ನು ವಿರೋಧಿಸಿ ಕೇಂದ್ರ ಸಚಿವೆ ಮತ್ತು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಲೋಕ ಸಭಾ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ. ಪ್ರಧಾನಿಗಳ ಸಲಹೆ ಮೇರೆಗೆ...

ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕೊಂಚ ಮಟ್ಟಿಗೆ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಸ್ಪಲ್ಪ ಮಟ್ಟಿಗೆ ಕಡಿಮೆಯಾಗಿದೆ. ಇದು ಕಳೆದ 51 ದಿನದಲ್ಲಿ ದಿನವೊಂದಕ್ಕೆ ದಾಖಲಾಗಿರುವ ಕನಿಷ್ಠ ಸಂಖ್ಯೆಯಾಗಿದೆ. ದೇಶದಲ್ಲಿ 1,27,510 ಕೊರೋನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ. 2,795 ಮಂದಿ...

ಇತಿಹಾಸ ನಿರ್ಮಿಸಿದ ಕಮಲಾ ಹ್ಯಾರೀಸ್: ಯುಎಸ್ ಉಪಾಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಭಾರತೀಯ ಮಹಿಳೆ

ವಾಷಿಂಗ್ಟನ್: ಅಮೆರಿಕದ ಉಪಾಧ್ಯಕ್ಷ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಭಾರತೀಯ ಮೂಲದ ಕಮಲದೇವಿ ಹ್ಯಾರಿಸ್ ಆಯ್ಕೆಯಾಗಿದ್ದಾರೆ. ನವೆಂಬರ್ ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕ್ ಪಕ್ಷದ ನಾಯಕ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಡೆಮಾಕ್ರಾಟಿಕ್ ಅಭ್ಯರ್ಥಿಯಾಗಿ ಕಣದಲ್ಲಿರುವ ಮಾಜಿ ಉಪಾಧ್ಯಕ್ ಜೋ...

ದೇಶದ್ರೋಹ ಕಾನೂನಿನ ನಿಬಂಧನೆ ಮರುಪರಿಶೀಲಿಸುವವರೆಗೆ ಕಾನೂನು ಬಳಕೆಗೆ ತಡೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ದೇಶದ್ರೋಹದ ಅಪರಾಧೀಕರಿಸುವ ಐಪಿಸಿಯ ಸೆಕ್ಷನ್ 124 ಎ ನಿಬಂಧನೆಗಳನ್ನು ಮರುಪರಿಶೀಲಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡಿದೆ. ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ 124ಎ ಅಡಿಯಲ್ಲಿ ಯಾವುದೇ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಬುಧವಾರ ಹೇಳಿದೆ. https://twitter.com/ANI/status/1524271649667043329 ಮರುಪರಿಶೀಲನೆ ಮುಗಿಯುವವರೆಗೆ ಕಾನೂನಿನ ಈ ನಿಬಂಧನೆಯನ್ನು ಬಳಸದಿರುವುದು...

ರಿಯಾ ಚಕ್ರವರ್ತಿ ಬಂಧನ :ದೇವರು ನಮ್ಮೊಂದಿಗಿದ್ದಾನೆ ಎಂದ ಸುಶಾಂತ್ ಸಿಂಗ್ ಸಹೋದರಿ

ಮಾದಕವಸ್ತು ನಿಯಂತ್ರಣ ಬ್ಯುರೋ, ರಿಯಾ ಚಕ್ರವರ್ತಿ ಯನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವು ತನಿಖೆ ಪ್ರಕರಣ ಹಲವು ಮಜಲುಗಳನ್ನು ದಾಟಿ ಮಾದಕವಸ್ತು ಖರೀದಿ ಮತ್ತು ಸರಬರಾಜು ಕುರಿತಂತೆ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯನ್ನು...

ಪ್ರಮುಖ ಸುದ್ದಿಗಳು

ಸುಳ್ಯ: ಮನೆ ಮೇಲೆ ಬಿದ್ದ ಮರ, ಮಲಗಿದ್ದವರಿಗೆ ಗಾಯ

0
ಸುಳ್ಯ: ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
error: Content is protected !!