ಅಕ್ಟೋಬರ್ ನಲ್ಲಿ ಗ್ರಾ.ಪಂ ಚುನಾವಣೆ ಬಗ್ಗೆ ತೀರ್ಮಾನ-ಆಯೋಗ ಸ್ಪಷ್ಟನೆ
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿರುವುದನ್ನು ಪ್ರಶ್ನಿಸಿ ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ. ಆರ್. ನಟರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ...
ಎಸೆಸೆಲ್ಸಿ ಪರೀಕ್ಷೆ ಮುಕ್ತಾಯ, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ-ಸುರೇಶ್ ಕುಮಾರ್
ಬೆಂಗಳೂರು: ಕೊರೊನಾ ಸಂಕಷ್ಟ, ಲಾಕ್ ಡೌನ್, ಇತರ ಗೊಂದಲಗಳ ನಡುವೆ ಕೊನೆಗೂ ಈ ಸಾಲಿನ ಎಸೆಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯಗೊಂಡಿದೆ. ಪರೀಕ್ಷೆ ಮುಗಿದ ಬಳಿಕ ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ , ಕೋವಿಡ್-19...
ಸೋಂಕು ಪ್ರಮಾಣ ಹೆಚ್ಚಿರುವ ಪ್ರದೇಶ ಸೀಲ್ ಡೌನ್ ಗೆ ಸಿಎಂ ಸೂಚನೆ-ಡಾ.ಕೆ.ಸುಧಾಕರ್
ಬೆಂಗಳೂರು : ಕಳೆದ ಕೆಲ ದಿನಗಳಿಂದ ಬೆಂಗಳೂರು ನಗರದ ಕೆಲವೆಡೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಂತಹ ಪ್ರದೇಶಗಳನ್ನು ಗುರುತಿಸಿ ಸೀಲ್‌ಡೌನ್ ಮಾಡುವಂತೆ ಕೋವಿಡ್ ನಿಗ್ರಹ ಕಾಯ೯ಪಡೆ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ....
ಗುರುಪುರದ ದುರಂತಕ್ಕೆ ಸಿಎಂ ಸಂತಾಪ; ಮೃತರ ಕುಟುಂಬಕ್ಕೆ ತಲಾ 5 ಲ.ರೂ. ಪರಿಹಾರ
ಮಂಗಳೂರು: ಮಂಗಳೂರು ತಾಲೂಕಿನ ಗುರುಪುರದಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಸರಕಾರದ ವತಿಯಿಂದ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಹಾಗೂ ಸಂತ್ರಸ್ತರ ಸ್ಥಳಾಂತರಕ್ಕೆ ಸೂಚಿಸಲಾಗಿದೆ.
https://twitter.com/CMofKarnataka/status/1279784638555123712
ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ದುರಂತದಲ್ಲಿ...
ಡಿಪ್ಲೋಮಾ ಸೆಮೆಸ್ಟರ್ ಪರೀಕ್ಷೆ ಮುಂದೂಡಿಕೆ
ಬೆಂಗಳೂರು : ಜುಲೈ 15 ರಿಂದ ನಡೆಯಬೇಕಿದ್ದ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದ್ದು ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದಾಗಿ ಶಿಕ್ಷಣ ಇಲಾಖೆ...
ಆನ್ ಲೈನ್ ಶಿಕ್ಷಣ; ಹೈಕೋರ್ಟ್ ಪ್ರತಿ ಅಧ್ಯಯನ ಮಾಡಿ ಮುಂದಿನ ಕ್ರಮ-ಸುರೇಶ್ ಕುಮಾರ್
ಆನ್ ಲೈನ್ ಶಿಕ್ಷಣ ವಿಚಾರದಲ್ಲಿ ಮಕ್ಕಳ ರಕ್ಷಣೆ ಹಾಗೂ ಪೋಷಕರ ಮೇಲಿನ ಶೋಷಣೆ ನಿಲ್ಲಿಸುವ ಉದ್ದೇಶದಿಂದ ರಾಜ್ಯಸರಕಾರ ಈ ಹಿಂದೆ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಅದರ ಪುರ್ಣಪ್ರತಿ ಕೈಸೇರಿದ ಬಳಿಕ ಅಧ್ಯಯನ ಮಾಡಿ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸುವುದಾಗಿ...
ಎಸ್ಸೆಸ್ಸೆಲ್ಸಿ ಮೌಲ್ಯಮಾಪನ, ದ.ಕ ಜಿಲ್ಲೆಯಲ್ಲಿ ಜು. 13ರಿಂದ ನಿಷೇಧಾಜ್ಞೆ
ಮಂಗಳೂರು : ಎಸ್.ಎಸ್.ಎಲ್.ಸಿ. ಪರೀಕ್ಷಾಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜುಲೈ 13ರಿಂದ ಜುಲೈ 20ರವರೆಗೆ ಮೌಲ್ಯಮಾಪನ ನಡೆಯುವ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...
ಅಂತಿಮ ವರ್ಷದ ಪದವಿ, ಇಂಜಿನಿಯರಿಂಗ್, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-ಸಚಿವ ಅಶ್ವತ್ಥನಾರಾಯಣ
ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸಲಾಗುವುದು. ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ...
‘ರಾಜ್ಯದ ಜನ ಕೇಳುತ್ತಿದ್ದಾರೆ ಲೆಕ್ಕ ಕೊಡಿ’- ಸಿದ್ದರಾಮಯ್ಯ ವಿಡಿಯೋ ಅಭಿಯಾನ
ಬೆಂಗಳೂರು: ಕೊರೊನಾ ನಿಯಂತ್ರಣದಲ್ಲಿ ರಾಜ್ಯಸರಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಸಾಮಾಜಿಕ ಜಾಲತಾಣದಲ್ಲಿ #LekkaKodi ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ವಿಡಿಯೋ ಅಭಿಯಾನ ಶುರು ಮಾಡಿದ್ದಾರೆ. ವಿಡಿಯೋದಲ್ಲಿ ರಾಜ್ಯಸರಕಾರದ ಮುಂದೆ ಹಲವು ಪ್ರಶ್ನೆಗಳನ್ನಿಟ್ಟಿರುವ ಸಿದ್ದರಾಮಯ್ಯನವರು, ಈ ಪ್ರಶ್ನೆಗಳಿಗೆ...
ಮಂಗಳವಾರದಿಂದ ಬೆಂಗಳೂರು ಸಂಪೂರ್ಣ ಲಾಕ್ ಡೌನ್-ಸಿಎಂ ಮಹತ್ವದ ನಿರ್ಧಾರ
ಬೆಂಗಳೂರು: ನಗರದಲ್ಲಿ ಕೊರೊನಾ ವೈರಸ್ ನಿಯಂತ್ರಣ ತಪ್ಪಿರುವ ಹಿನ್ನೆಲೆ ಒಂದು ವಾರ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದೆ. 14.07.2020ರ ಮಂಗಳವಾರ ರಾತ್ರಿ 8.00 ಗಂಟೆಯಿಂದ ಏಳು ದಿನಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತೆ...