ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಭೂಸುಧಾರಣಾ ಮಸೂದೆಗೆ ಅಂಗೀಕಾರ
ಬೆಂಗಳೂರು: ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕರ್ನಾಟಕ ಭೂ ಕಂದಾಯ ಸುಧಾರಣಾ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
ವಿಧೇಯಕದ ಪ್ರಕಾರ ಇಲ್ಲಿಯವರೆಗೆ ಕೃಷಿಕರು ಮಾತ್ರ ಕೃಷಿ ಜಮೀನು ಖರೀದಿ ಮಾಡಲು ಅವಕಾಶವಿತ್ತು. ಇನ್ನುಮುಂದೆ ಯಾರು ಬೇಕಾದರೂ ಕೃಷಿ ಜಮೀನು ಖರೀದಿ ಮಾಡಬಹುದು. ಹೊಸ ತಿದ್ದುಪಡಿಯಲ್ಲಿ...
18 ತಿಂಗಳ ಬಳಿಕ ಚಾರ್ಮಾಡಿಘಾಟಿಯಲ್ಲಿ ಕೆಎಸ್ಆರ್ ಟಿಸಿ ಬಸ್ ಸಂಚಾರ ಆರಂಭ
ಚಿಕ್ಕಮಗಳೂರು : ಸುಮಾರು 18 ತಿಂಗಳ ಬಳಿಕ ಚಾರ್ಮಾಡಿ ಘಾಟಿಯಲ್ಲಿ ಕೆಎಸ್ಆರ್ ಟಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.
2019ರಲ್ಲಿ ಸುರಿದ ಭಾರಿ ಮಳೆಯಿಂದ ಘಾಟಿ ರಸ್ತೆ ಕುಸಿತವಾಗಿತ್ತು. ಇದರಿಂದ ಭಾರೀ ಗಾತ್ರದ ವಾಹನಗಳ ಸಂಚಾರ ಕಷ್ಟಸಾಧ್ಯವಾಗಿತ್ತು....
ಕರ್ನಾಟಕದಲ್ಲಿ ಇಂದು ನಾಳೆ ಭಾರೀ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ; ದಕ್ಷಿಣಕನ್ನಡ ಸೇರಿ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 6ರ ವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಹೇಳಲಾಗಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು...
ತಾಲ್ಲೂಕುಗಳಲ್ಲಿರುವ ‘ಮಿನಿ ವಿಧಾನಸೌಧ’ ಕಟ್ಟಡಗಳ ಮರುನಾಮಕರಣ: ಇನ್ಮುಂದೆ ‘ತಾಲ್ಲೂಕು ಆಡಳಿತ ಸೌಧ’ ಎಂದು ಹೆಸರು
ಬೆಂಗಳೂರು: ತಾಲ್ಲೂಕು ಆಡಳಿತ ಕಛೇರಿಗಳನ್ನು ರಾಜ್ಯದ ಭಾಷಾನೀತಿಗೆ ಒಳಪಡುವಂತೆ ಹಾಗೂ ರಾಜ್ಯದ ಅಧಿಕೃತ ಭಾಷೆ ಕನ್ನಡವಾಗಿರುವುದರಿಂದ , ನಾಡು - ನುಡಿ ಸಂಸ್ಕೃತಿಗೆ ಪೂರಕವಾಗಿ 'ಮಿನಿ ವಿಧಾನಸೌಧ'ಗಳ ಹೆಸರನ್ನು ಬದಲಾಯಿಸಿ 'ತಾಲೂಕು ಆಡಳಿತ ಸೌಧ' ಎಂದು ಮರುನಾಮಕರಣ ಮಾಡಲಾಗಿದೆ.
ಸುತ್ತೋಲೆಯಲ್ಲಿ ಏನಿದೆ?
ತಾಲ್ಲೂಕು ಮಟ್ಟದಲ್ಲಿ ಕಂದಾಯ...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ನೆರವೇರಿಸಿದ್ದಾರೆ.
ಇಂದು ಬೆಳಗ್ಗೆ 7.45 ರ ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿಗಳೊಂದಿಗೆ...
ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು
ಬೆಂಗಳೂರು: ಕೊರೊನಾ ಸೋಂಕಿಗೊಳಗಾಗಿ ಹೋಂ ಐಸೋಲೇಶನ್ ನಲ್ಲಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇದೀಗ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಸೋಮವಾರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಹೋಂ ಐಸೋಲೇಷನ್ ನಲ್ಲಿದ್ದರು.
ವೈದ್ಯರ ಸಲಹೆ ಮೇರೆಗೆ ನಾನು ಈಗ...
ಏಪ್ರಿಲ್ 1 ರಿಂದ ವೇತನ ಹೆಚ್ಚಳ ಜಾರಿಗೊಳಿಸುವುದಾಗಿ ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು: ಸರ್ಕಾರಿ ನೌಕರರಿಗೆ ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ 17% ವೇತನ ಹೆಚ್ಚಳ ಮಾಡುವುದಾಗಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ, 17% ವೇತನ...
ಕೊರೊನಾ ನಿಯಮ ಪಾಲಿಸದಿದ್ದರೆ ದಂಡವೇ ಅಸ್ತ್ರ: ಕಠಿಣ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ನೂತನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಕೊರೊನಾ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದುಬಾರಿ ದಂಡಾಸ್ತ್ರ ಪ್ರಯೋಗಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಕೊರೊನಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು...
“ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ”- ಇಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿಯಿಂದ ಕನ್ನಡದಲ್ಲಿ ಟ್ವೀಟ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, 2 ದಿನಗಳ ಕಾಲ ರಾಜ್ಯದಲ್ಲಿ ಇದ್ದು ವಿವಿಧ ಕಾರ್ಯಕ್ರಗಳಲ್ಲಿ ಭಾಗವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ಪ್ರಧಾನಿಯವರು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಗಮನಸೆಳೆದಿದ್ದಾರೆ.
'ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ...
ಜೂನ್ 21ರಂದು ನಿಗದಿಯಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ-ಸಚಿವ ಸುರೇಶ್ ಕುಮಾರ್
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿನ ಪ್ರಮಾಣ ಹೆಚ್ಚುತ್ತಿರುವುದರಿಂದ ಜೂನ್ 21ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ....