ವಾಣಿಜ್ಯ ಜಾಹಿರಾತು
ಉಪ್ಪಿನಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ಬೆದ್ರೋಡಿ ಬಳಿ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಹೊತ್ತು ಸಾಗಿಸುತ್ತಿದ್ದ ವೇಳೆ ಏಕಾಏಕಿ ಲಾರಿಗೆ ಬೆಂಕಿ ತಗುಲಿದೆ. ವಾಹನದೊಳಗಿನ ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ನಡೆದಿದೆ ಎಂದು ತಿಳಿದುಬಂದಿದೆ. ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿದ ತಕ್ಷಣವೇ ಡ್ರೈವರ್ ಲಾರಿಯಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಾಣಿಜ್ಯ ಜಾಹಿರಾತು