ವಾಣಿಜ್ಯ ಜಾಹಿರಾತು

ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಈ ಹಿಂದೆ ಪರೇಡ್‌ನಲ್ಲಿ ಕರ್ನಾಟಕ ಸ್ತಬ್ದಚಿತ್ರಕ್ಕೆ ಅನುಮತಿ ನಿರಾಕರಿಸಿದ್ದ ಸಮಿತಿ ಕೊನೆ ಕ್ಷಣದಲ್ಲಿ ರಾಜ್ಯದ ಟ್ಯಾಬ್ಲೊಗೆ ಅವಕಾಶ ನೀಡಿದೆ. ಈ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿದಿದೆ.

13 ವರ್ಷಗಳಿಂದ ಕರ್ನಾಟಕ ಗಣರಾಜೋತ್ಸವ ಪರೇಡ್‌ನಲ್ಲಿ ಸ್ತಬ್ಧ ಚಿತ್ರ ಪ್ರದರ್ಶಿಸಿತ್ತು. ಈ ಬಾರಿ ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ದೃಷ್ಟಿಯಿಂದ ಕರ್ನಾಟಕಕ್ಕೆ ಅನುಮತಿ ಇಲ್ಲ ಎಂದು ಟ್ಯಾಬ್ಲೋ ಆಯ್ಕೆ ಸಮಿತಿ ಹೇಳಿತ್ತು. ಸಮಿತಿಯ ನಿರ್ಧಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಕರ್ನಾಟಕಕ್ಕೆ ಆದ ಅನ್ಯಾಯಕ್ಕೆ ಸಾಕಷ್ಟು ಮಂದಿ ಅಸಮಾಧಾನ ಹೊರ ಹಾಕಿದ್ದರು. ಜನರು ಸೋಶಿಯಲ್ ಮೀಡಿಯಾಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಇದನ್ನೆಲ್ಲ ಗಮನಿಸಿದ ರಾಜ್ಯ ಸರ್ಕಾರ ಕೇಂದ್ರದ ಮಟ್ಟದಲ್ಲಿ ಒತ್ತಡ ತರುವ ಪ್ರಯತ್ನ ನಡೆಸಿತ್ತು.

ಚುನಾವಣಾ ಸಂದರ್ಭದಲ್ಲಿ ವಿವಾದಗಳನ್ನು ಸೃಷ್ಟಿಸಲು ಹಿಂಜರಿದಿರುವ ಕೇಂದ್ರ ಸರ್ಕಾರ ಕರ್ನಾಟಕದ ಟ್ಯಾಬ್ಲೋ ಪ್ರದರ್ಶನಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲೇ ಆಯ್ಕೆ ಸಮಿತಿ ಕರ್ನಾಟಕದ ನಾರಿ ಶಕ್ತಿ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಿದ್ದು, 14 ಬಾರಿ ಕರ್ತವ್ಯ ಪಥ್‌ನಲ್ಲಿ ರಾಜ್ಯದ ಟ್ಯಾಬ್ಲೋ ಪ್ರದರ್ಶನಗೊಳ್ಳಲಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.