ವಾಣಿಜ್ಯ ಜಾಹಿರಾತು

ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕರ್ನಾಟಕದ ಸಿನಿಮಾ ಮಂದಿರಗಳಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

ಭಾನುವಾರ (ಮಾರ್ಚ್ 13) ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ”ಈ ಸಿನಿಮಾ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ. ಯಾವ ರೀತಿ ಕಾಶ್ಮೀರದಲ್ಲಿ ಪಂಡಿತರ ಮೇಲೆ ದಾಳಿಯಾಗಿತ್ತು ಎನ್ನುವುದನ್ನು ಸಿನಿಮಾದಲ್ಲಿ ತೋರಿಸಿದ್ದಾರೆ. ಅದೆಷ್ಟೋ ಜನ ಉಗ್ರರ ಕೈಲಿ ಸಿಕ್ಕಿ ಪ್ರಾಣವನ್ನ ಬಿಟ್ಟಿದ್ದಾರೆ. ಹೀಗಾಗಿಯೇ ಅಲ್ಲಿ ಆರ್ಟಿಕಲ್ 370 ಅನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿತು. ಇದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಪ್ರತಿಯೊಬ್ಬ ಭಾರತೀಯರು ಈ ಸಿನಿಮಾವನ್ನ ನೋಡಬೇಕು. ಹೀಗಾಗಿ ನಾನು ಸಿನಿಮಾದ ಸಂಪೂರ್ಣ ತೆರಿಗೆ ವಿನಾಯಿತಿ ನೀಡಿ ಅದೇಶ ಮಾಡುತ್ತೇನೆ’ ಎಂದಿದ್ದಾರೆ.

Basavaraj S Bommai on Twitter: “Kudos to @vivekagnihotri for #TheKashmirFiles, a blood-curdling, poignant & honest narrative of the exodus of Kashmiri Pandits from their home land. To lend our support to the movie & encourage our people to watch it, we will make the movie tax-free in Karnataka.” / Twitter

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವು 1990 ರಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆಯ ಕುರಿತಾದ ಕತೆಯನ್ನು ಒಳಗೊಂಡಿದೆ. ಕಶ್ಮೀರಿ ಪಂಡಿತರು ಏಕೆ ಮತ್ತು ಹೇಗೆ ಜಮ್ಮು ಕಾಶ್ಮೀರ ಬಿಟ್ಟು ತೆರಳಿದರು ಎಂಬುದನ್ನು ಸಿನಿಮಾದಲ್ಲಿ ತೋರಿಸಲಾಗಿದೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ‘ಪ್ರೊಪಾಗಾಂಡ’ ಎಂದೂ ಸಹ ಕರೆಯಲಾಗುತ್ತಿದೆ. ಹಿಂದು-ಮುಸ್ಲಿಂ ನಡುವೆ ದ್ವೇಷ ಹೆಚ್ಚಿಸುವ ಕಾರ್ಯವನ್ನು ಮಾಡಲೆಂದೇ ಈ ಸಿನಿಮಾ ನಿರ್ಮಿಸಲಾಗಿದೆ. ಸಿನಿಮಾದಲ್ಲಿ ಒಂದು ಕೋಮನ್ನು ಕೆಟ್ಟವರೆಂದು ಇನ್ನೊಂದು ಕೋಮನ್ನು ಅಮಾಯಕರೆಂದು ಚಿತ್ರಿಸಲಾಗಿದೆ ಎಂಬ ಆರೋಪಗಳು ಅಲ್ಲಲ್ಲಿ ಕೇಳಿ ಬರುತ್ತಿವೆ. ಸಿನಿಮಾದ ವಿರುದ್ಧ ಸ್ಕ್ವಾಡ್ರನ್ ಲೀಡರ್ ರವಿ ಖನ್ನಾ ಪತ್ನಿ ದೂರು ದಾಖಲಿಸಿದ್ದಾರೆ. ಸಿನಿಮಾವು ಸತ್ಯ ಘಟನೆಯನ್ನು ತಿರುಚಿ ಮಾಡಲಾಗಿದೆ. ಅಲ್ಲದೆ ತಮ್ಮ ಪತಿಯನ್ನು ಆಕ್ಷೇಪಾರ್ಯವಾಗಿ ಸಿನಿಮಾದಲ್ಲಿ ಚಿತ್ರಿಸಲಾಗಿದೆ. ಸಿನಿಮಾಕ್ಕೂ ನಿಜ ಘಟನೆಗಳಿಗೂ ಸಂಬಂಧವಿಲ್ಲ ಎಂದು ಅವರು ಆರೋಪಿಸಿದ್ದಾರೆ. ರವಿ ಖನ್ನಾ ಪತ್ನಿಯ ದೂರಿನ ವಿಚಾರಣೆ ನಡೆಸಿರುವ ಜಮ್ಮು ಕಾಶ್ಮೀರದ ಜಿಲ್ಲಾ ನ್ಯಾಯಾಲಯ ಸಿನಿಮಾದ ಕೆಲವು ದೃಶ್ಯಗಳನ್ನು ಕತ್ತರಿಸುವಂತೆ ಆದೇಶಿಸಿದೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದು, ತೇಜ್ ನಾರಾಯಣ್ ಅಗರ್ವಾಲ್, ಅಭಿಷೇಕ್ ಅಗರ್ವಾಲ್, ವಿವೇಕ್ ಅಗ್ನಿಹೋತ್ರಿ ಮತ್ತು ಪಲ್ಲವಿ ಜೋಶಿ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಸಿನಿಮಾದಲ್ಲಿ ಅನುಪಮ್ ಖೇರ್, ಚಕ್ರವರ್ತಿ ಮಿಥುನ್, ಕನ್ನಡದ ನಟ ಪ್ರಕಾಶ್ ಬೆಳವಾಡಿ, ಪಲ್ಲವಿ ಜೋಶಿ, ದರ್ಶನ್ ಕುಮಾರ್ ಇನ್ನಿತರರು ನಟಿಸಿದ್ದಾರೆ. ಈ ಸಿನಿಮಾಕ್ಕೆ ಕರ್ನಾಟಕದಲ್ಲಿ ಮಾತ್ರವಲ್ಲ, ಗುಜರಾತ್, ಹರಿಯಾಣ, ಮಧ್ಯ ಪ್ರದೇಶಗಳಲ್ಲಿಯೂ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.

ಮಾರ್ಚ್ 11ರಂದು ಸಿನಿಮಾ ತೆರೆಕಂಡಿದ್ದು, ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಗಿಟ್ಟಿಸಿದೆ. ಬಿಡುಗಡೆಯಾದ ಮೊದಲ ದಿನ 3.50 ಕೋಟಿ, ಎರಡನೇ ದಿನ 8.25 ಮತ್ತು 3ನೇ ದಿನದಂದು 15.10 ಕೋಟಿ ರೂಪಾಯಿಗಳನ್ನು ಗಳಿಸುವ ಮೂಲಕ ಒಟ್ಟು ಮೂರು ದಿನದ ಕಲೆಕ್ಷನ್ ಈಗ 27.15 ಕೋಟಿ ರೂ. ಆಗಿದೆ.

 

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.