ವಾಣಿಜ್ಯ ಜಾಹಿರಾತು
ಮಂಗಳೂರು: ತುಳು ಭಾಷೆಯ ಖ್ಯಾತ ರಂಗಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರದ ಪಂಪ್ ವೆಲ್ ಬಳಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಅರವಿಂದ್ ಬೋಳಾರ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅತೀ ವೇಗವಾಗಿ ಬಂದ ಬಸ್ಸೊಂದು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಅರವಿಂದ್ ಬೋಳಾರ್ ತಾನು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವನ್ನು ಬ್ರೇಕ್ ಹಾಕಿದ್ದಾರೆ.
ಬೈಕ್ ಸ್ಕಿಡ್ ಆದ ಪರಿಣಾಮ ಬೋಳಾರ್ ಬೈಕ್ ನಿಂದ ಕೆಳಗೆ ಬಿದ್ದಿದ್ದು, ಕಾಲಿಗೆ ಗಾಯವಾಗಿದೆ ಎಂದು ಹೇಳಲಾಗಿದೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ವಾಣಿಜ್ಯ ಜಾಹಿರಾತು