ವಾಣಿಜ್ಯ ಜಾಹಿರಾತು
ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಕಾಂಗ್ರೇಸ್ ಗೆ ದೊಡ್ಡ ಪೆಟ್ಟು ಬಿದ್ದಿದ್ದು. ಮೈಸೂರು ಭಾಗದ ಪ್ರಮುಖ ಮುಖಂಡ ಶಾಸಕ ತನ್ವೀರ್ ಸೇಠ್ ರಾಜಕೀಯ ನಿವೃತ್ತಿ ಘೋಷಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದ್ದಾರೆ.
ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ಹೀಗಾಗಿ ಈ ಬಾರಿ ನನಗೆ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. ಆದ್ರೆ ಕಾಂಗ್ರೆಸ್‌ನಲ್ಲೇ ಇರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಾಣಿಜ್ಯ ಜಾಹಿರಾತು