ವಾಣಿಜ್ಯ ಜಾಹಿರಾತು

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 639 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,20,183ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಇಂದು 299 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 1,15,487ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ 1,699 ಜನ ಕೊರೋನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 2,990 ಸಕ್ರಿಯ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿ ಕೋರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು , ಶುಕ್ರವಾರ 497 ಮಂದಿಗೆ ಪಾಸಿಟಿವ್‌ ಧೃಡಪಟ್ಟಿದೆ. ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 2335ಕ್ಕೇರಿದೆ. 76 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 497 ಮಂದಿಯಲ್ಲಿ 264 ಮಂದಿ ಪುರುಷರಾದರೆ, 133 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 354 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ, ಕುಂದಾಪುರ ತಾಲೂಕಿನ 68 ಮಂದಿ ಹಾಗೂ ಕಾರ್ಕಳ ತಾಲೂಕಿನ 70 ಹಾಗೂ ಇತರ ಜಿಲ್ಲೆಯ 5 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಈ ಮೂರು ತಾಲೂಕುಗಳ ಪಾಸಿಟಿವಿಟಿ ಪ್ರಮಾಣ ಸದ್ಯ 10.20%, 4.33% ಹಾಗೂ 4.35% ಆಗಿದೆ. ಜಿಲ್ಲೆಯ ಪ್ರಮಾಣ 7.40% ರಲ್ಲಿದೆ.

ಇಂದು ಪಾಸಿಟಿವ್ ಬಂದ 497 ಮಂದಿಯಲ್ಲಿ 13 ಮಂದಿಯನ್ನು ಕೋವಿಡ್ ಕೇರ್‌ ಸೆಂಟರ್‌ಗೂ, 12 ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, 10 ಮಂದಿ ಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತಿದ್ದು, ಉಳಿದ 462 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here