ವಾಣಿಜ್ಯ ಜಾಹಿರಾತು
ಬೆಂಗಳೂರು: 2021ರ ಜನವರಿ 26ರಂದು ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ಉಪಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ನೇಮಿಸಿ ಸರಕಾರ ಮುಖ್ಯ ಕಾರ್ಯದರ್ಷಿನಿರ್ದೇಶಿಸಿದ್ದಾರೆ. ಅದರಂತೆ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ ರಾಜ್ಯದ ಇತರ ಜಿಲ್ಲಾ ಕೇಂದ್ರಗಳಲ್ಲಿ ಉಪಮುಖ್ಯಮಂತ್ರಿ ಹಾಗೂ ನಿಗದಿತ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಉಡುಪಿಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಅವರನ್ನು ಧ್ವಜಾರೋಹಣ ನೆರವೇರಿಸಲು ನಿರ್ದೇಶಿಸಲಾಗಿದೆ.
ಅನಾರೋಗ್ಯ ಅಥವಾ ಇತರೆ ಕಾರಣಗಳಿಂದ ಸಚಿವರ ಅನುಪಸ್ಥಿತಿಯಲ್ಲಿ ಆಯಾ ಜಿಲ್ಲಾಧಿಕಾರಿಯವರೇ ಧ್ವಜಾರೋಹಣ ಮಾಡಲು ಸೂಚಿಸಲಾಗಿದೆ.
ವಾಣಿಜ್ಯ ಜಾಹಿರಾತು