ವಾಣಿಜ್ಯ ಜಾಹಿರಾತು

ಮಂಗಳೂರು: ಮುಂದಿನ ವಿಧಾನಸಭಾ ಚುನಾವಣೆ ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆ ಇದೆ. ನಿಷ್ಪಕ್ಷಪಾತ ಚುನಾವಣೆ ನಡೆಸುವ ಉದ್ದೇಶದಿಂದ ಅನಧಿಕೃತ ಜಾಹೀರಾತು ಫಲಕ ತೆರವುಗೊಳಿಸುವುದರೊಂದಿಗೆ, ಸಾರ್ವಜನಿಕರ ಸಭೆ ಸಮಾರಂಭಗಳ ಮೇಲೆ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಡಿ.ಸಿ. ರವಿಕುಮಾರ್ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ರಾಜಕೀಯ ಪಕ್ಷ ಮತ್ತು ರಾಜಕೀಯ ವ್ಯಕ್ತಿಗಳು ಸಾರ್ವಜನಿಕ ಔತಣಕೂಟ ಏರ್ಪಡಿಸುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಸ್ಥಳೀಯ ಪ್ರಾಧಿಕಾರಗಳು, ಪೊಲೀಸ್‌ ಇಲಾಖೆ, ಅಬಕಾರಿ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಐಪಿಸಿ ಕಲಂ 171 ರಡಿಯಲ್ಲಿ ಹಾಗೂ ಸಂಬಂಧಪಟ್ಟ ಇತರ ಕಾಯ್ದೆಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಹಾಕಲಾಗಿರುವ ಬ್ಯಾನರ್‌- ಬಂಟಿಂಗ್ಸ್‌ ಮತ್ತು ಫ್ಲೆಕ್ಸ್‌, ಗೋಡೆ ಬರಹ ಮತ್ತು ಇತರ ಜಾಹಿರಾತುಗಳನ್ನು ತೆರವುಗೊಳಿಸಿ ಪ್ರತೀ ದಿನ ವರದಿ ಸಲ್ಲಿಬೇಕು ಎಂದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅನುಮತಿ ನೀಡುವಾಗ ಸಭೆ ಮುಕ್ತಾಯವಾದ ಅನಂತರ ಬ್ಯಾನರ್‌ -ಬಂಟಿಂಗ್‌ ತೆರವುಗೊಳಿಸಲು ಸೂಚಿಸಬೇಕು. ಕಾನೂನು ಸುವ್ಯವಸ್ಥೆ, ಸಾಮಾಜಿಕ ಅಶಾಂತಿ ಹಾಗೂ ಶಬ್ದಮಾಲಿನ್ಯ ಉಂಟುಮಾಡುವ ಯಾವುದೇ ಚಟುವಟಿಕೆ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಕೊಂಡು, ಜಿಲ್ಲಾಡಳಿತಕ್ಕೆ ವರದಿ ನೀಡಲು ಡಿ.ಸಿ. ರವಿಕುಮಾರ್ ಸೂಚಿಸಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.