ವಾಣಿಜ್ಯ ಜಾಹಿರಾತು

ನವದೆಹಲಿ: ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳ ಇನ್ನು ಮುಂದೆ ಆಸ್ಪತ್ರೆಗಳಲ್ಲಿ ಮತ್ತು ಕ್ಲಿನಿಕ್‌ಗಳಲ್ಲಿ ಖರೀದಿಸಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಗುರುವಾರ ಅನುಮೋದನೆ ನೀಡಿದೆ.

ಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು-2019ರ ಅಡಿಯಲ್ಲಿ ಕೋವಿಶೀಲ್ಡ್, ಕೋವಾಕ್ಸಿನ್ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡಲು ಡಿಸಿಜಿಐ ಅನುಮತಿ ನೀಡಿದೆ.

ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳಿಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಷರತ್ತುಬದ್ಧ ಒಪ್ಪಿಗೆ ಸೂಚಿಸಿದ್ದು, ಮೆಡಿಕಲ್ ಸ್ಟೋರ್‌ಗಳಲ್ಲಿ ಲಸಿಕೆಗಳು ಲಭ್ಯವಿರುವುದಿಲ್ಲ. ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳು ಈ ಲಸಿಕೆಗಳನ್ನು ಖರೀದಿಸಲು ಮತ್ತು ಅವುಗಳನ್ನು ನಿರ್ವಹಿಸಲು ಸಾಧ್ಯವಾಗುತ್ತದೆ. ಪ್ರತಿ ಆರು ತಿಂಗಳಿಗೊಮ್ಮೆ ವ್ಯಾಕ್ಸಿನೇಷನ್ ಡೇಟಾವನ್ನು ಡಿಸಿಜಿಐಗೆ ಸಲ್ಲಿಸಬೇಕು ಮತ್ತು ಡೇಟಾವನ್ನು ಕೋವಿನ್ ಅಪ್ಲಿಕೇಶನ್‌ನಲ್ಲಿ ನವೀಕರಿಸಬೇಕಾಗುತ್ತದೆ.

ಪ್ರಸ್ತುತ ಕೋವ್ಯಾಕ್ಸಿನ್ ಪ್ರತಿ ಡೋಸ್ ಗೆ ರೂ. 1,200 ವೆಚ್ಚವಾಗುತ್ತದೆ. ಆದರೆ ಕೋವಿಶೀಲ್ಡ್ ರೂ. 150 ಸೇವಾ ಶುಲ್ಕ ಸೇರಿದಂತೆ ಖಾಸಗಿ ಸೌಲಭ್ಯಗಳಲ್ಲಿ ರೂ. 780 ಆಗಿದೆ. ನಿಯಮಿತ ಮಾರುಕಟ್ಟೆ ಅನುಮೋದನೆ ಪಡೆದ ನಂತರ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಬೆಲೆಯನ್ನು ಪ್ರತಿ ಡೋಸ್ ಗೆ 275 ರೂ ಮತ್ತು ಹೆಚ್ಚುವರಿ ಸೇವಾ ಶುಲ್ಕ 150 ರೂ.ಗೆ ಮಿತಿಗೊಳಿಸಲಾಗುವುದು. ಲಸಿಕೆಗಳನ್ನು ಕೈಗೆಟುಕುವಂತೆ ಮಾಡಲು ಬೆಲೆಯನ್ನು ಮಿತಿಗೊಳಿಸಲು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ(ಎನ್‌ಪಿಪಿಎ) ಕಾರ್ಯ ನಿರ್ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 19ರಂದು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್ ಸಿಒ) ಕೋವಿಡ್-19 ಕುರಿತ ವಿಷಯ ತಜ್ಞರ ಸಮಿತಿಯು(ಎಸ್‌ಇಸಿ) ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ(ಎಸ್‌ಐಐ) ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಗೆ ಮುಕ್ತ ಮಾರುಕಟ್ಟೆ ಅನುಮೋದನೆಯನ್ನು ಬಳಸಲು ಶಿಫಾರಸು ಮಾಡಿತ್ತು.

ANI on Twitter: “#COVID19 | Drugs Controller General of India (DCGI) grants conditional market approval for Covishield and Covaxin https://t.co/q5GO65usPr” / Twitter

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.