ವಾಣಿಜ್ಯ ಜಾಹಿರಾತು

ಮಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಮೆದುಳಿಗೂ, ಮಾತಿಗೂ ಯಾವುದೇ ಸಂಬಂಧ ಇಲ್ಲ. ಅವರಿಗೆ ಸಚಿವ ಸ್ಥಾನ ಕೊಟ್ಟಿಲ್ಲ. ಮುಂದೆ ವಿಧಾನಸಭಾ ಟಿಕೆಟ್​​ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಇದೇ ಕಾರಣಕ್ಕೆ ಮಾನಸಿಕ ಅಸ್ವಸ್ಥತೆಯಿಂದ ಮಾತನಾಡುತ್ತಿದ್ದಾರೆ ಎಂದು ವಿಪಕ್ಷ ಉಪನಾಯಕ ಯು ಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯು ಟಿ ಖಾದರ್, ಆಜಾನ್ ಕುರಿತು ಮಾತನಾಡಿ ಮೇಲಿನವರನ್ನು ಮೆಚ್ಚಿಸಲು ನೋಡುತ್ತಿದ್ದಾರೆ. ಅವರ ಮಾತಿಗೆ ಯಾವುದೇ ಬೆಲೆ ಇಲ್ಲ. ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ಸಂವಿಧಾನ ಬದ್ಧ ಕಾಂಗ್ರೆಸ್​​ನ್ನು ಅಧಿಕಾರಕ್ಕೆ ತರಲು ಜನರು ಶ್ರಮಿಸಬೇಕು ಎಂದು ಹೇಳಿದರು.

ಚುನಾವಣಾ ಸಂದರ್ಭ ಭಾವನಾತ್ಮಕ ಮಾತು ಬೇಡ. ಜನ ಸಾಮಾನ್ಯರ ಬದುಕಿಗೆ ಏನು ಕೊಡುಗೆ ನೀಡಿದ್ದೇವೆ ಎಂಬುದನ್ನು ಜನರಿಗೆ ತಿಳಿಸಿ. ಮುಗ್ಧ ಜನರನ್ನು ಭಾವನಾತ್ಮಕವಾಗಿ ಮಾಡಿ, ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುವುದು ಬೇಡ.ಈಗಾಗಲೇ ಐದು ವರ್ಷ ರಾಜ್ಯದ ಜನರು ಕಷ್ಟ ಅನುಭವಿಸಿದ್ದಾರೆ. ಹೀಗಾಗಿ ಮಾಡಿರುವ ಅಭಿವೃದ್ಧಿ ಬಗ್ಗೆ ಮಾತನಾಡಲಿ ಎಂದರು.

ಪ್ರತಿಯೊಂದು ಧರ್ಮಕ್ಕೂ ಅದರದೇ ಪ್ರಾಮುಖ್ಯತೆ, ಅದರದ್ದೇ ಆದ ಮೌಲ್ಯ ಇದೆ. ಎಲ್ಲ ಧರ್ಮವನ್ನು ಅರ್ಥ ಮಾಡಿಕೊಂಡು, ಪರಸ್ಪರ ಸಂಸ್ಕೃತಿ ಅರ್ಥ ಮಾಡಿಕೊಂಡು ವಿಶ್ವಾಸ ಭರಿತ ಸಮಾಜ ನಿರ್ಮಾಣ ಮಾಡಬೇಕು. ಯಾವುದೇ ವ್ಯಕ್ತಿ ಯಾವುದೇ ಧರ್ಮವನ್ನು ಅಪಹಾಸ್ಯ ಮಾಡಿದರೆ, ಆ ಧರ್ಮಕ್ಕೆ ಏನೂ ಆಗುವುದಿಲ್ಲ. ಒಂದು ವೇಳೆ ಧರ್ಮವನ್ನು ಅಪಹಾಸ್ಯ ಮಾಡಿದರೆ ಅದು ಅವರ ಸಂಸ್ಕೃತಿ ಮತ್ತು ನೀಚತನವನ್ನು ತೋರಿಸುತ್ತದೆ ಎಂದು ಹೇಳಿದರು.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.