ವಾಣಿಜ್ಯ ಜಾಹಿರಾತು

ಕಡಬ: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.

ನಿವೃತ್ತ ಸೈನಿಕ ಗಂಗಾಧರ ಗೌಡ ಮೃತ ದುರ್ದೈವಿ.

ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದರು. ಈ ವೇಳೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಕುಸಿದುಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.