ವಾಣಿಜ್ಯ ಜಾಹಿರಾತು
ಹಿಂದಿ ಚಿತ್ರರಂಗದ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (72) ವಿಧಿವಶರಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಕೆಲವು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಸರೋಜ್ ಖಾನ್ ಅವರನ್ನು ಜೂನ್ 17ರಂದು ಮುಂಬೈನ ಬಾಂದ್ರಾದಲ್ಲಿನ ಗುರು ನಾನಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಶುಕ್ರವಾರ ರಾತ್ರಿ ಹೃದಯಾಘಾತಕ್ಕೆ ಒಳಗಾಗಿ ಅವರು ಕೊನೆಯುಸಿರೆಳೆದಿದ್ದಾರೆ. ತೀವ್ರ ಮಧುಮೇಹ ಮತ್ತು ಇತರೆ ಅನಾರೋಗ್ಯದ ಸಮಸ್ಯೆಗಳಿಂದನೂ ಸರೋಜ್ ಖಾನ್ ಬಳಲುತ್ತಿದ್ದರು ಎನ್ನಲಾಗಿದೆ. ಸರೋಜ್ ಖಾನ್ ಅವರನ್ನು ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ನೆಗೆಟಿವ್ ಬಂದಿತ್ತು. ಶೀತದ ಕಾರಣದಿಂದಾಗಿ ಅವರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಇನ್ನು ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ತಿಳಿಸಿದ್ದರು. ಆದರೆ ಅದಕ್ಕೂ ಮೊದಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಬಾಲಿವುಡ್‌ನಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ನೃತ್ಯ ಸಂಯೋಜನೆಯಲ್ಲಿ ತೊಡಗಿಸಿಕೊಂಡಿದ್ದ ಸರೋಜ್ ಖಾನ್, 2,000ಕ್ಕೂ ಅಧಿಕ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಸರೋಜ್ ಅವರು ಪತಿ ಬಿ. ಸೋಹನ್‌ಲಾಲ್ ಮಗ ಹಮೀದ್ ಖಾನ್, ಹೆಣ್ಣುಮಕ್ಕಳಾದ ನಟಿ ಹೀನಾ ಖಾನ್ ಮತ್ತು ಸುಖಿನಾ ಖಾನ್ ಅವರನ್ನು ಅಗಲಿದ್ದಾರೆ.
ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.