ವಾಣಿಜ್ಯ ಜಾಹಿರಾತು
ಮಂಗಳೂರು: ಸುರತ್ಕಲ್ ನ ಫಾಝಿಲ್ ಮತ್ತು ಸುಳ್ಯದ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರದ ತಾರತಮ್ಯ ನೀತಿಯನ್ನು ಖಂಡಿಸಿ ಹಾಗೂ ಹತ್ಯೆಗೀಡಾದವರ ಸಾವಿಗೆ ಸೂಕ್ತ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸುರತ್ಕಲ್ ವಲಯ ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರಕಾರದ ತಾರತಮ್ಯ ಧೋರಣೆಯ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಸರಕಾರ ತನ್ನ ತಪ್ಪನ್ನು ತಿದ್ದಿಕೊಂಡು ಸಮಾನ ನ್ಯಾಯ ಕಲ್ಪಿಸಬೇಕೆಂದು ಆಗ್ರಹಿಸಿದರು. ಬಳಿಕ ಮುಸ್ಲಿಂ ಐಕ್ಯತಾ ವೇದಿಕೆಯ ಮುಖಂಡರನ್ನೊಳಗೊಂಡ ನಿಯೋಗ ದ.ಕ ಜಿಲ್ಲಾಧಿಕಾರಿಯವರ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿತು.
ಪ್ರತಿಭಟನೆಗೆ ಮುಸ್ಲಿಮ್ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು ಬೆಂಬಲ ಸೂಚಿಸಿದ್ದಾರೆ.
ವಾಣಿಜ್ಯ ಜಾಹಿರಾತು