ವಾಣಿಜ್ಯ ಜಾಹಿರಾತು

ಉಡುಪಿ: ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆ ನಾಲ್ಕು ತಾಲೂಕುಗಳಾದ ಉಡುಪಿ, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲೂಕಿನಲ್ಲಿ ಮತದಾನ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ.

ಕೋವಿಡ್ ನಿಯಮಾವಳಿ ಬಳಸಿ ಮತದಾನ ನಡೆಯುತ್ತಿದ್ದು, ಮಾಸ್ಕ್ ಇದ್ದವರಿಗೆ ಮಾತ್ರ ಮತಗಟ್ಟೆಯೊಳಗೆ ಪ್ರವೇಶ ನೀಡಲಾಗುತ್ತಿದೆ. ಸ್ಯಾನಿಟೈಸರ್, ಸಾಮಾಜಿಕ ಅಂತರ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿದ್ದು, ಬೆಳ್ಳಂಬೆಳಗ್ಗೆ ಸರತಿ ಸಾಲಲ್ಲಿ ನಿಂತು ಜನರು ಮತ ಚಲಾಯಿಸುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಮೊದಲ ಹಂತದ ಮತದಾನಕ್ಕೆ ಒಟ್ಟು 3,70,234 ಮತದಾರರು ಹಕ್ಕು ಚಲಾಯಿಸಲು ಅರ್ಹತೆ ಪಡೆದಿದ್ದಾರೆ. ಒಟ್ಟು 560 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಉಡುಪಿ, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲೂಕುಗಳ 66 ಗ್ರಾಮ ಪಂಚಾಯಿತಿಗಳ 1,047 ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. 2,349 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದು, ಇವರಲ್ಲಿ 1,108 ಮಹಿಳೆಯರು, 149 ಎಸ್ಸಿ, 182 ಎಸ್ಟಿ, 543 ಹಿಂದುಳಿದ ‘A’ ವರ್ಗ, 132 ಹಿಂದುಳಿದ ‘B’ ವರ್ಗ ಮತ್ತು 1,343 ಸಾಮಾನ್ಯ ಕ್ಷೇತ್ರದ ಸ್ಪರ್ಧಿಗಳಿದ್ದಾರೆ.
ಮೊದಲ ಹಂತದಲ್ಲಿ ಈಗಾಗಲೇ 63 ಮಂದಿ ಸದಸ್ಯರ ಅವಿರೋಧವಾಗಿ ಆಯ್ಕೆಯಾಗಿದ್ದು, ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾ.ಪಂ.ನಲ್ಲಿ ಚುನಾವಣಾ ಬಹಿಷ್ಕಾರ ಮಾಡಲಾಗಿದೆ.

ಸುಗಮ ಚುನಾವಣಾ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ 2,464 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.