ವಾಣಿಜ್ಯ ಜಾಹಿರಾತು

ನವದೆಹಲಿ : ಭಾರತದ ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಜನರಲ್ ಅನಿಲ್ ಚೌಹಾಣ್ ಅಧಿಕಾರ ವಹಿಸಿಕೊಂಡಿದ್ದು ,ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವ ಮೂಲಕ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಿದರು.

ಜನರಲ್ ಅನಿಲ್ ಚೌಹಾಣ್ ಮಾತನಾಡಿ ,ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅತ್ಯುನ್ನತ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ನಾನು ಹೆಮ್ಮೆಪಡುತ್ತೇನೆ. ನಾನು ರಕ್ಷಣಾ ಸಿಬ್ಬಂದಿ ಮುಖ್ಯಸ್ಥನಾಗಿ ಮೂರು ರಕ್ಷಣಾ ಪಡೆಗಳ ನಿರೀಕ್ಷೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ. ನಾವು ಎಲ್ಲಾ ಸವಾಲುಗಳು ಮತ್ತು ತೊಂದರೆಗಳನ್ನು ಒಟ್ಟಿಗೆ ನಿಭಾಯಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಅನಿಲ್ ಚೌಹಾಣ್ ಅವರು ಕಳೆದ ವರ್ಷ ಮೇನಲ್ಲಿ ಪೂರ್ವ ಸೇನಾ ಕಮಾಂಡರ್ ಹುದ್ದೆಯಿಂದ ನಿವೃತ್ತರಾಗಿ ರಾಷ್ಟ್ರೀಯ ಭದ್ರತಾ ಮಂಡಳಿಯ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದರು.

ಸುಮಾರು 40 ವರ್ಷಗಳ ವೃತ್ತಿಜೀವನದಲ್ಲಿ, ಜನರಲ್ ಚೌಹಾಣ್ ಹಲವಾರು ಕಮಾಂಡ್, ಮಿಲಿಟರಿ ಹುದ್ದೆಯಲ್ಲಿದ್ದರು , ಅಲ್ಲದೆ ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ಭಾರತದಲ್ಲಿ ಬಂಡಾಯ-ವಿರೋಧಿ ಕಾರ್ಯಾಚರಣೆಗಳಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದರು.

ಇದೇ ಮೊದಲ ಬಾರಿಗೆ ನಿವೃತ್ತ ಅಧಿಕಾರಿಯೊಬ್ಬರು ಈ ಹುದ್ದೆಗೆ ನೇಮಕಗೊಂಡಿದ್ದು, ನೇಮಕಾತಿ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.

ಈ ಮೊದಲು ಭಾರತದ ಸೇನಾಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಅವರು ತಮಿಳುನಾಡಿನ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾಗಿದ್ದರು. ಈಗ ಅವರ ಸ್ಥಾನಕ್ಕೆ ಅನಿಲ್ ಚೌಹಾಣ್ ಅವರನ್ನು ನೇಮಕಮಾಡಲಾಗಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.