ವಾಣಿಜ್ಯ ಜಾಹಿರಾತು
ಮಂಗಳೂರು : ಅತಿಥಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ಕಿ ಸಮೀಪದ ಎಸ್ ಕೋಡಿ ಎಂಬಲಿ ನಡೆದಿದೆ.
ನಗರದ ವಾಮದಪದವು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದ ಅಮಿತಾ ಬಿವಿ (34) ಮೃತ ದುರ್ದೈವಿ.
ಕಳೆದ ಕೆಲ ದಿನಗಳ ಹಿಂದೆ ತಾಯಿಯ ಮನೆಗೆ ತೆರಳಿದ್ದ ಅಮಿತಾ ಇಂದು ಗಂಡನ ಮನೆಗೆ ವಾಪಸ್ ಆಗಿದ್ದರು. ಆದರೆ ಗಂಡ ಕೆಲಸಕ್ಕೆ ತೆರಳಿದ ಬಳಿಕ ಬೆಡ್ ರೂಮ್ ನಲ್ಲಿ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಅಮಿತಾ ಪತಿ ಹಾಗೂ ಎಂಟು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಾಣಿಜ್ಯ ಜಾಹಿರಾತು