ವಾಣಿಜ್ಯ ಜಾಹಿರಾತು

ಭಾರತೀಯ ಚಿತ್ರರಂಗ ಖ್ಯಾತ ಗಾಯಕಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತೆ ವಾಣಿ ಜಯರಾಮ್ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಚೆನ್ನೈನ ನುಂಗಂಬಕ್ಕಂನಲ್ಲಿರುವ ನಿವಾಸದಲ್ಲಿ ವಾಣೀ ಜಯರಾಮ್ ನಿಧನರಾಗಿದ್ದು ವಾಣಿ ಅವರ ನಿಧನಕ್ಕೆ ಕಾರಣ ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ, ಮನೆಯಲ್ಲಿ ಆಯತಪ್ಪಿ ಬಿದ್ದಿದ್ದ ವಾಣಿ ಜಯರಾಂ ತಲೆಗೆ ತೀವ್ರವಾಗಿ ಗಾಯವಾಗಿತ್ತು.  ಈ ಗಾಯದಿಂದ ವಾಣಿ ಜಯರಾಂ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈಚೆಗಷ್ಟೇ ಭಾರತದ ಮೂರನೇ ಅತ್ಯುತ್ತಮ ನಾಗರಿಕ ಪ್ರಶಸ್ತಿಗಳಲ್ಲೊಂದಾದ ಪದ್ಮಭೂಷಣ ಪ್ರಶಸ್ತಿಯನ್ನು ವಾಣಿ ಜಯರಾಮ್ ಅವರಿಗೆ ಘೋಷಣೆ ಮಾಡಲಾಗಿತ್ತು.

10 ಸಾವಿರಕ್ಕೂ ಹೆಚ್ಚು ಹಾಡುಗಳ ಮೂಲಕ ಜನರನ್ನು ರಂಜಿಸಿದ ಗಾಯಕಿ ವಾಣಿ ಜಯರಾಂ ನಿಗೂಢವಾಗಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ತಮಿಳು, ತೆಲಗು, ಕನ್ನಡ, ಮಲಯಾಳಂ, ಹಿಂದಿ, ಉರ್ದು, ಮರಾಟಿ, ಬೆಂಗಾಲಿ, ಬೋಜ್‌ಪುರಿ, ತುಳು ಮತ್ತು ಓಡಿಯಾ ಭಾಷೆಗಳಲ್ಲಿ ವಾಣಿ ಜಯರಾಂ ಹಾಡಿದ್ದು ವಾಣಿ ಜಯರಾಂ ನಿಧನಕ್ಕೆ ಚಿತ್ರರಂಗ ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ

2018ರಲ್ಲಿ ವಾಣಿ ಅವರ ಪತಿ  ಹಾಗೂ ಉದ್ಯಮಿ ಜಯರಾಂ ನಿಧನರಾಗಿದ್ದರು.

1973ರಲ್ಲಿ ಕನ್ನಡ ಸಿನಿಮಾ ರಂಗದಲ್ಲಿ ಹಾಡಲು ಆರಂಭಿಸಿದ ವಾಣಿ ಜಯರಾಂ ಒಂದು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ.  ‘ನಗು ನೀ ನಗು, ಕಿರು ನಗೆ ನಗು’, ‘ಮೋಹನಾಂಗ ನಿನ್ನ ಕಂಡು ಓಡಿ ನಾ ಬಂದೆನೋ’, ‘ಈ ಶತಮಾನದ ಮಾದರಿ ಹೆಣ್ಣು’, ‘ದಾರಿ ಕಾಣದಾಗಿದೆ ರಾಘವೇಂದ್ರನೆ’, ತೆರೆದಿದೆ ಮನೆ ಓ ಬಾ ಅತಿಥಿ’, ‘ಮಧು ಮಾಸ ಚಂದ್ರಮ ನೈದಿಲೆಗೆ ಸಂಭ್ರಮ’, ‘ವಸಂತ ಬರೆದನು ಒಲವಿನ ಓಲೆ’, ‘ಗಾಡಾಂಧಕಾರದ ಇರುಳಲ್ಲಿ, ಕಾರ್ಮೋಡ ನೀರಾದ ವೇಳೆಯಲಿ’, ‘ಗೌರಿ ಮನೋಹರಿಯ ಕಂಡೆ’, ‘ನೀಲ ಮೇಘ ಶ್ಯಾಮ, ನಿತ್ಯಾನಂದ ಧಾಮ’ ಸೇರಿದಂತೆ ಇನ್ನೂ ಸಾಕಷ್ಟು ಸೂಪರ್ ಹಿಟ್ ಗೀತೆಗಳಿಗೆ ವಾಣಿ ಜಯರಾಂ ಧ್ವನಿಯಾಗಿದ್ದರು.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.