ವಾಣಿಜ್ಯ ಜಾಹಿರಾತು

ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಾಗಿದ್ದರಿಂದ ಅರ್ಧಕ್ಕೆ ಸ್ಥಗಿತಗೊಂಡು ಅನಿರ್ಧಿಷ್ಟಾವಧಿಗೆ ಮುಂದೂಡಲ್ಪಟ್ಟಿದ್ದ ಐಪಿಎಲ್​-14ನೇ ಆವೃತ್ತಿ ಕೊನೆಗೂ ಮತ್ತೆ ಆರಂಭಗೊಳ್ಳಲಿದೆ ಎಂದು ಬಿಸಿಸಿಐ ತಿಳಿಸಿದೆ. ಐಪಿಎಲ್​ 2021 ಆವೃತ್ತಿಯನ್ನು ದುಬೈನಲ್ಲಿ ಮುಂದುವರೆಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 18 ಅಥವಾ 20ಕ್ಕೆ ಐಪಿಎಲ್ 14ನೇ ಆವೃತ್ತಿ ಪುನಾರಂಭಗೊಳ್ಳಲಿದೆ. ದ್ವಿತೀಯಾರ್ಧದಲ್ಲಿ 10 ಮುಖಾಮುಖಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ.

ಮೇ 4ರಂದು ಏಕಾಏಕಿ ನಿಂತಿದ್ದ ಪಂದ್ಯ ಈಗ ಮತ್ತೆ ಆರಂಭಗೊಳ್ಳುವುದು ಖಚಿತವಾಗಿದೆ. ಈ ಸರಣಿಯ ಫೈನಲ್ ಪಂದ್ಯವನ್ನು ಅಕ್ಟೋಬರ್ 9 ಅಥವಾ 10ರಂದು ಆಡಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಿಸಿಸಿಐ ಈಗಾಗಲೇ ಎಲ್ಲಾ ಫ್ರಾಂಚೈಸಿಗಳೊಂದಿಗೆ ಚರ್ಚಿಸಿದ್ದು, ಬಾಕಿ ಉಳಿದಿರುವ ಪಂದ್ಯಾವಳಿಗಳನ್ನು ಸೆಪ್ಟೆಂಬರ್ 18-20ರ ಆಸುಪಾಸಿನಲ್ಲಿ ಆರಂಭಿಸುವುದಾಗಿ ಮಾಹಿತಿ ರವಾನಿಸಿದೆ.

ಬಯೋ ಬಬಲ್ ನಲ್ಲಿದ್ದ ಹಲವು ಆಟಗಾರರಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದ ಬಳಿಕ ಮೇ.4ರಂದು ಐಪಿಎಲ್ ಪಂದ್ಯಾವಳಿಯನ್ನು ಮುಂದೂಡಲಾಗಿತ್ತು. ಇಂಗ್ಲೆಂಡ್​ ವಿರುದ್ಧದ ಟೆಸ್ಟ್ ಮ್ಯಾಚ್ ಸೆಪ್ಟೆಂಬರ್ 14ರಂದು ಅಂತ್ಯಗೊಳ್ಳಲಿದ್ದು ಅಲ್ಲಿಂದ ಭಾರತೀಯ ಆಟಗಾರರೆಲ್ಲರೂ ಅತ್ಯಂತ ಸುರಕ್ಷಿತ ರೀತಿಯಲ್ಲಿ ದುಬೈ ತಲುಪಲಿದ್ದಾರೆ. ಹಾಗೆಯೇ ಉಳಿದ ಆಟಗಾರರನ್ನೂ ಕರೆತರಲಾಗುವುದು ಎಂದು ಆಯೋಜಕರು ಹೇಳಿದ್ದಾರೆ. ಭಾರತದಲ್ಲಿ ಬಯೋ ಬಬಲ್​ ಇದ್ದಾಗಿಯೂ ಉಂಟಾಗಿದ್ದ ಸಮಸ್ಯೆಗಳು ಮತ್ತೆ ತಲೆದೋರದಂತೆ ನೋಡಿಕೊಳ್ಳುವುದಾಗಿಯೂ ಇದೇ ವೇಳೆ ಭರವಸೆ ನೀಡಲಾಗಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.