ವಾಣಿಜ್ಯ ಜಾಹಿರಾತು

ಬೆಳ್ತಂಗಡಿ: ಗ್ರಾಮದ ಜನರ ಸಮಸ್ಯೆಗಳನ್ನು ಅರಿಯಲು ಗ್ರಾಮವಾಸ್ತವ್ಯ ಸಹಕಾರಿ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.
ಅವರು ಇಂದು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು, ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜ.31ರಂದು ಕಡಬದ ಕೊಂಬಾರು ಹಿ.ಪ್ರಾ. ಶಾಲೆಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿಂದು ಬಿಡುಗಡೆಗೊಳಿಸಿ ಮಾತನಾಡಿದರು.

ಪತ್ರಕರ್ತರು ಸಾಮಾನ್ಯವಾಗಿ ಗ್ರಾಮದ ಜನರ ಸಮಸ್ಯೆಗಳನ್ನು ವರದಿ ಮಾಡಿ ಅದರ ಪರಿಹಾರಕ್ಕೆ ಪ್ರಯತ್ನಿಸುತ್ತಾರೆ. ಇದೀಗ ಪತ್ರಕರ್ತರೇ ಗ್ರಾಮಕ್ಕೆ ತೆರಳಿ ಜನರ ಬಳಿಗೆ ಹೋಗುವುದರಿಂದ ಜನಸಾಮಾನ್ಯರು ಅನುಭವಿಸುತ್ತಿರುವ ಮೂಕವೇದನೆಯನ್ನು ಹೇಳಿಕೊಳ್ಳಲು ಜನರಿಗೆ ಅವಕಾಶ. ಜೊತೆಗೆ ಪತ್ರಕರ್ತರಿಗೂ ಜನರ ಸಮಸ್ಯೆಯನ್ನು ತಿಳಿದುಕೊಳ್ಳಲು ಒಂದು ಅವಕಾಶ. ಈ ರೀತಿಯ ಪತ್ರಕರ್ತರ ಗ್ರಾಮವಾಸ್ತವ್ಯ ಗ್ರಾಮಾಭಿವೃದ್ಧಿಗೆ ಪೂರಕ ಎಂದು ಅವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಪುಷ್ಪರಾಜ ಬಿ.ಎನ್, ಗ್ರಾಮಾಂತರ ಕಾರ್ಯದರ್ಶಿ ಸಿದ್ದಿಕ್ ನೀರಾಜೆ, ಕಾರ್ಯಕಾರಿ ಸದಸ್ಯರಾದ ಭಾಸ್ಕರ ರೈ ಕಟ್ಟ, ಅತಿಥೇಯ ಕಡಬದ ಅಧ್ಯಕ್ಷ ನಾಗರಾಜ ಎನ್.ಕೆ, ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್ ಪೆರ್ಲ, ಬೆಳ್ತಂಗಡಿ ಪತ್ರಕರ್ತರ ಸಂಘದ ಕಾರ್ಯದರ್ಶಿ ಜಾರಪ್ಪ ಪೂಜಾರಿ ಬೆಳಾಲು, ಸದಸ್ಯರಾದ ಆರ್.ಎನ್ ಪೂವಣಿ, ಧನಕೀರ್ತಿ ಅರಿಗ ಮೊದಲಾದವರು ಉಪಸ್ಥಿತರಿದ್ದರು.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.