ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮನದೀಪ್ ರಾಜ್ ಇಂದು ಬೆಳಗ್ಗೆ (ಭಾನುವಾರ) ನಿಧನರಾಗಿದ್ದಾರೆ. 74 ವರ್ಷ ವಯಸ್ಸಿನ ಮನದೀಪ್ ರಾಜ್ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.
ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್ ರಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಬಳಿಕ ಮನೆಗೆ ವಾಪಸ್ ಆಗಿದ್ದ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.
1949ರಲ್ಲಿ ಜನಿಸಿದ ಮನದೀಪ್ ರಾಯ್ ಹಲವು ದಶಕಗಳ ಕಾಲ ಹಾಸ್ಯ ಕಲಾವಿದರಾಗಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟ ಮನದೀಪ್ ರಾಜ್ ಬೆಳದಿಂಗಳ ಬಾಲೆ, ಆಪ್ತರಕ್ಷಕ, ಪುಷ್ಪಕ ವಿಮಾನ, ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪಾ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಇಂದಿನ ತಲೆ ಮಾರಿನ ಕಲಾವಿದರೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು.
ಮನದೀಪ್ ರಾಯ್ ನಿಧನಕ್ಕೆ ಸಿನಿಮಾ ರಂಗ, ಸ್ನೇಹಿತರು, ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.