ವಾಣಿಜ್ಯ ಜಾಹಿರಾತು
ಕಾಪು: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ನಡೆದಿದೆ.
ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಗಾಯಾಗೊಂಡ ವಿದ್ಯಾರ್ಥಿನಿ.
ಇಂದು (ಮಾ.11) ಬೆಳಗ್ಗೆ ಶಾಲೆಗೆ ಬರುತ್ತಿದ್ದ ವೇಳೇ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದಾಳೆ. ಈ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಬಾಲಕಿಯ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ತಕ್ಷಣವೇ ಸ್ಥಳೀಯರು ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಾಲಕಿಯ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ವಾಣಿಜ್ಯ ಜಾಹಿರಾತು