ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ರಾಜ್ಯಾದ್ಯಂತ ಫೆ.23ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಉತ್ತಮ ಮಳೆಯಾಗಿದೆ.
ಬೆಂಗಳೂರು, ಕೊಡಗು ಸೇರಿ ಹಲವೆಡೆ ಶನಿವಾರ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಕೊಡಗಿನಲ್ಲಿ ಶನಿವಾರ ಸಂಜೆ ಸುರಿದ ಆಲಿಕಲ್ಲು ಮಳೆಗೆ ಕಾಫಿ, ಹಸಿ ಮೆಣಸಿನ ಫಸಲು ಸಂಪೂರ್ಣ ನಾಶವಾಗಿದೆ. ತುಮಕೂರು, ಉತ್ತರ ಕನ್ನಡ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಭದ್ರಾವತಿ, ಶಿವಮೊಗ್ಗ ಸೇರಿ ರಾಜ್ಯದ ವಿವಿಧೆಡೆ ಮಳೆಯಾಗಿದೆ.
ಕರ್ನಾಟಕ, ತೆಲಂಗಾಣ, ತಮಿಳುನಾಡು, ಕೇರಳ, ಚತ್ತೀಸ್ ಘಡ ರಾಜ್ಯಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರಿಯಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ತುಮಕೂರು, ಮಲೆನಾಡು, ಕೊಡಗು, ಬೆಳಗಾವಿ, ಬೀದರ್, ಬಾಗಲಕೋಟೆ, ರಾಯಚೂರು, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಫೆ.23ರವರೆಗೆ ಮಳೆ ಮುಂದುವರಿಕೆ: ಹವಾಮಾನ ಇಲಾಖೆ
ವಾಣಿಜ್ಯ ಜಾಹಿರಾತು
ವಾಣಿಜ್ಯ ಜಾಹಿರಾತು