ವಾಣಿಜ್ಯ ಜಾಹಿರಾತು

ತಿರುವನಂತಪುರಂ: ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಬೂಟುಗಾಲಿನಿಂದ ಒದ್ದಿದ್ದ ಕೇರಳದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ಆರೋಪಿಸಲಾದ ಪ್ರಯಾಣಿಕರೊಬ್ಬರನ್ನು ಪೊಲೀಸ್ ಪದೇ ಪದೇ ಬೂಟುಗಾಲಿನಿಂದ ಒದೆಯುತ್ತಿರುವುದನ್ನು ತೋರಿಸುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಕೇರಳದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರ ಈ ಅಮಾನವೀಯ ವರ್ತನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ತಪ್ಪಿತಸ್ಥ ಪೊಲೀಸ್​​ನ್ನು ಅಮಾನತು ಮಾಡಲಾಗಿದೆ.

ನೆಲದಲ್ಲಿ ಅಸಹಾಯಕವಾಗಿ ಕುಳಿತ ಪ್ರಯಾಣಿಕನ ಮೇಲೆ ಪೊಲೀಸ್ ದರ್ಪ ತೋರಿಸುವಾಗ ಇನ್ನೊಬ್ಬ ಪೊಲೀಸ್ ಮತ್ತು ರೈಲ್ವೆ ಅಧಿಕಾರಿ ಅಲ್ಲೇ ನಿಂತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಭಾನುವಾರ ಮಾವೇಲಿ ಎಕ್ಸ್‌ಪ್ರೆಸ್‌ನಲ್ಲಿ ಈ ಘಟನೆ ನಡೆದಿದೆ. ಟಿಕೆಟ್ ಪರಿಶೀಲಿಸಲು ಪೊಲೀಸರು ಕಣ್ಣೂರಿನಿಂದ ರೈಲು ಹತ್ತಿದ್ದು, ಪ್ರಯಾಣಿಕ ಟಿಕೆಟ್ ಕೊಡಲು ಸಾಧ್ಯವಾಗದಿದ್ದಾಗ ಆತನನ್ನು ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

‘ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದ ವ್ಯಕ್ತಿಯ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದು ಅಕ್ಷ್ಯಮ್ಯ ಅಪರಾಧ. ಸಮಸ್ಯೆಯನ್ನು ಕಾನೂನುಬದ್ಧವಾಗಿ ನಿಭಾಯಿಸುವ ಬದಲು ಕೇರಳ ಪೊಲೀಸರು ಜನರ ಮೇಲೆ ಬಲಪ್ರಯೋಗ ಮಾಡಿರುವುದು ಸರಿಯಲ್ಲ’ ಎಂದು ಕೇರಳ ಬಿಜೆಪಿ ನಾಯಕ ಎಸ್.ಸುರೇಶ್ ಹೇಳಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here