ವಾಣಿಜ್ಯ ಜಾಹಿರಾತು

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಧ್ರುವ ನಾರಾಯಣ್‌ (61) ಇಂದು ಹೃದಯಾಘಾತದಿಂದ ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಧ್ರುವ ನಾರಾಯಣ್ ಅವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಧ್ರುವ ನಾರಾಯಣ್ ಅವರು ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿಯೂ ಆಯ್ಕೆಯಾಗಿದ್ದರು.

1983ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಧ್ರುವನಾರಾಯಣ್‌ 1984 ರಲ್ಲಿ ಜಿಕೆವಿಕೆಯ ಎನ್‌ಎಸ್‌ಯುಐ ಅಧ್ಯಕ್ಷನಾಗಿ ಆಯ್ಕೆಯಾದರು. ನಂತರ 1986 ರಲ್ಲಿ ರಾಜ್ಯ ಯುವ ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆದರೆ 1999ರಲ್ಲಿ ಮೊದಲ ಬಾರಿಗೆ ಸಂತೆಮಾರಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಸೋಲನ್ನನುಭವಿಸಿದ್ದರು. ಆದರೆ 2004ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 1 ಮತದ ಅಂತರದ ಗೆಲುವು ಸಾಧಿಸಿ ಇತಿಹಾಸವನ್ನು ಸೃಷ್ಟಿಸಿದ್ದರು.

ಸಂಸದರಾಗಿದ್ದ ವೇಳೆ ಅನುದಾನ ಬಳಕೆ ವಿಚಾರದಲ್ಲೂ ಧ್ರುವನಾರಾಯಣ್ ಉತ್ತಮ ಹೆಸರು ಮಾಡಿದ್ದರು. ಈ ಬಾರಿ ಚುನಾವಣೆಯಲ್ಲಿ ನಂಜನಗೂಡು ಕಾಂಗ್ರೆಸ್‌ ಅಭ್ಯಥಿಯಾಗಿ ಸ್ಪರ್ಧಿಸುವವರಿದ್ದು, . ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಈ ಮಧ್ಯೆ ಧ್ರುವ ನಾರಾಯಣ್ ನಿಧನ ಕಾಂಗ್ರೆಸ್ ಪಕ್ಷದ ದೊಡ್ಡ ಪೆಟ್ಟು ಬಿದ್ದಿದ್ದು ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.