ವಾಣಿಜ್ಯ ಜಾಹಿರಾತು

ಉಡುಪಿ: ಗುಜರಿ ವಸ್ತುಗಳನ್ನು ಸಂಗ್ರಹಿಸಿ ಅದರಿಂದ ಬಂದು ಹಣದಲ್ಲಿ ಜೀವನ ನಡೆಸುತ್ತಿದ್ದ 78 ವರ್ಷದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಬಳಿಯಿದ್ದ ನಗದನ್ನು ದೋಚಿದ್ದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಶಿವಮೊಗ್ಗ ಮೂಲದ ಇರ್ಫಾನ್ ಆತ್ಯಾಚಾರ ನಡೆಸಿದ್ದ ಆರೋಪಿ. ಉಡುಪಿಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು ಇರ್ಫಾನ್ 2017 ಜೂನ್ 5 ರಂದು ಉಡುಪಿಯಲ್ಲಿ ಗುಜರಿ ಮಾರಾಟ ಮಾಡಿಕೊಂಡು ಬದುಕುತ್ತಿದ್ದ ವೃದ್ಧೆಯನ್ನು ತೆಂಕಪೇಟೆ ಪರಿಸರದ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿ ಆಕೆಯ ಬಳಿಯಿದ್ದ ರೂ 30000 ನಗದನ್ನು ದೋಚಿ ಪರಾರಿಯಾಗಿದ್ದ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಪೊಲೀಸರು ಆರೋಪಿ ಇರ್ಫಾನ್ ನನ್ನು ಬಂಧಿಸಿ ಸುದೀರ್ಘ ವಿಚಾರಣೆ ನಡೆಸಿತ್ತು. ಆರೋಪಿ ಅತ್ಯಾಚಾರ ನಡೆಸಿರುವ ಸಾಭಿತಾಗಿರುವ ಹಿನ್ನೆಲೆಯಲ್ಲಿ 10 ವರ್ಷದ ಜೈಲು ಶಿಕ್ಷೆ, ಐವತ್ತು ಸಾವಿರ ದಂಡ ಹಾಗೂ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಸಾದಾ ಶಿಕ್ಷೆ ಹಾಗೂ ಐದು ಸಾವಿರ ದಂಡ ವಿಧಿಸಿದೆ.

ದಂಡದ ಮೊತ್ತವನ್ನು ಸಂತ್ರಸ್ತ ವೃದ್ಧೆಗೆ ನೀಡಲು ನ್ಯಾಯಾಲಯ ಆದೇಶ ನೀಡಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತ ಶೆಟ್ಟಿ ತಿಳಿಸಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.