ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ನಿನ್ನೆಯಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೂವರು ಬಲಿಯಾಗಿದ್ದರು. ಇಂದು ಬಂಟ್ವಾಳದಲ್ಲಿ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಂಟ್ವಾಳದ ಕಲ್ಲಡ್ಕ ನಿವಾಸಿ ಸುಮಾರು 49 ವರ್ಷದ ವ್ಯಕ್ತಿ ಮೃತಪಟ್ಟವರು. ಇವರು ಕಿಡ್ನಿ, ಲಿವರ್ ಹಾಗೂ ಟಿಬಿ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಜೂನ್.೨೭ರಂದು ದಾಖಲಾಗಿದ್ದರು. ಆದರೆ ಇವರಿಗೆ ಕೊರೋನಾ ಸೋಂಕು ತಗುಲಿರಬಹುದೆಂಬ ಅನುಮಾನದ ಮೇರೆಗೆ ಪರೀಕ್ಷಿಸಲಾಯಿತು. ನಿನ್ನೆ ಮೃತರ ಗಂಟಲು ದ್ರವ ಮಾದರಿ ಪರೀಕ್ಷೆ ವರದಿಯಲ್ಲಿ ಕೋವಿಡ್-19 ಇರುವುದು ದೃಢಪಟ್ಟಿತ್ತು. ಇಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಮೂಲಕ ಬಂಟ್ವಾಳ ತಾಲೂಕಿನಲ್ಲಿ ಕೊರೋನಾ ಸೋಂಕಿಗೆ ೫ನೇ ಬಲಿಯಾಗಿದ್ದು, ದ.ಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು, ಕೋವಿಡ್ ದೃಢ
ವಾಣಿಜ್ಯ ಜಾಹಿರಾತು
ವಾಣಿಜ್ಯ ಜಾಹಿರಾತು