ವಾಣಿಜ್ಯ ಜಾಹಿರಾತು
ಮಂಗಳೂರು: ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದೆಯೆನ್ನಲಾದ 11 ದೋಣಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಂಗಳೂರು ನಗರದ ಫೈಸಲ್ ನಗರ ಬಳಿ ನಡೆದಿದೆ.
ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಫೈಸಲ್ ನಗರದ ಬಳಿ ನದಿಯಿಂದ ರಾತ್ರಿ ಹೊತ್ತು ಅಕ್ರಮವಾಗಿ ದೋಣಿಗಳಲ್ಲಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಈ ದಾಳಿ ನಡೆಸಲಾಗಿದೆ.
ಪೊಲೀಸರು ಅಕ್ರಮವಾಗಿ ಮರಳುಗಾರಿಕೆಯಲ್ಲಿ ತೊಡಗಿದ್ದ 11 ದೋಣಿಗಳನ್ನು ವಶಪಡಿಸಿಕೊಂಡಿದ್ದು, ಗಣಿ ಇಲಾಖೆಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ವಾಣಿಜ್ಯ ಜಾಹಿರಾತು