ವಾಣಿಜ್ಯ ಜಾಹಿರಾತು

ಮಂಗಳೂರು: 2022ರ ನ. 19ರಂದು ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ತನಿಖೆಯನ್ನು ಎನ್‌ ಐ ಎ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಮೈಸೂರಿನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ ಸ್ಫೋಟ ನಡೆಯುವ ಮೊದಲು ಮೈಸೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಅಲ್ಲಿಯೇ ಮೊಬೈಲ್‌ ತಂತ್ರಜ್ಞಾನದ ಬಗ್ಗೆ ತರಬೇತಿ ಕೂಡ ಪಡೆದಿದ್ದ. ಈ ವೇಳೆ ನಕಲಿ ಆಧಾರ್‌ ಕಾರ್ಡ್‌ ಕೂಡ ಆತನ ಬಳಿ ಇತ್ತು. ಈ ಹಿನ್ನೆಲೆಯಲ್ಲಿ ಎನ್‌ ಐ ಎ ಅಧಿಕಾರಿಗಳು ಮೈಸೂರಿನಲ್ಲಿ ಶೋಧ ಕಾರ್ಯ ನಡೆಸಿದ್ದು ಕೆಲವು ಪರಿಕರಗಳು, ನಗದನ್ನು ಜಫ್ತಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ನ. 19ರಂದು ಸಂಜೆ 4.30ರ ಸುಮಾರಿಗೆ ಶಾರೀಕ್‌ ನಾಗುರಿ ಬಳಿ ಆಟೋ ಹತ್ತಿ ಪಂಪ್‌ವೆಲ್‌ಗೆ ಬಿಡುವಂತೆ ತಿಳಿಸಿದ್ದಾರೆ. ಆದರೆ ಶಾರೀಕ್ ಆಟೋ ಹತ್ತಿದ ಕೆಲವೇ ನಿಮಿಷಯಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡ ಉಗ್ರ ಶಾರೀಖ್ ಹಾಗೂ ರಿಕ್ಷಾ ಚಾಲಕ ಪುರುಷೋತ್ತಮ್ ಗಂಭೀರವಾಗಿ ಗಾಯಗೊಂಡಿದ್ದರು.

ಸದ್ಯ ಇಬ್ಬರಿಗೂ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಉಗ್ರ ಶಾರೀಖ್ ಎನ್‌ಐಎ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಿ ವಶಕ್ಕೆ ಪಡೆದುಕೊಂಡಿತ್ತು. ಈ ಬಗ್ಗೆ ಜ. 20ರಂದು ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಎನ್ ಐ ಎ ಅಧಿಕಾರಿಗಳು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಜಾಡು ಹಿಡಿದು ಮೈಸೂರಿನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.