ವಾಣಿಜ್ಯ ಜಾಹಿರಾತು

ಮಂಗಳೂರು: ಅರೆವೈದ್ಯಕೀಯ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ತೆಗೆದುಕೊಳ್ಳುವಾಗ ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ ದೇರಳಕಟ್ಟೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದೆ.

ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್(ಪ್ರ್ಯಾರಾಮೆಡಿಕ್ ಇಂಟರ್ನ್) ವಿದ್ಯಾರ್ಥಿಯಾಗಿದ್ದು, ಫೆ.13ರ ರಾತ್ರಿ ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.